SHIVAMOGGA | MALENADUTODAY NEWS | ಮಲೆನಾಡು ಟುಡೆ
Oct 7, 2024 | SHIVAMOGGA NEWS | ಇ-ಆಸ್ತಿ ವ್ಯವಸ್ಥೆ ಜಾರಿ : ಸ್ವತ್ತಿನ ನಮೂನೆ 2/3 ಇ-ಆಸ್ತಿ ತಂತ್ರಾಂಶದಲ್ಲಿ ಮಾತ್ರ ಲಭ್ಯ
ಶಿವಮೊಗ್ಗದಲ್ಲಿ ಇನ್ನಮುಂದೆ ಆಸ್ತಿ ಖಾತೆ ಇ ಆಸ್ತಿ ತಂತ್ರಾಶದಲ್ಲಿಯೇ ಪಡೆದುಕೊಳ್ಳಬೇಕಿದೆ. ಈ ಸಂಬಂಧ ಶಿವಮೊಗ್ಗ ಮಹಾನಗರ ಪಾಲಿಕೆ ಆಯುಕ್ತರು ಹೊರಡಿಸಿರುವ ಪ್ರಕಟಣೆ ಇಲ್ಲಿದೆ
ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಕಾವೇರಿ-2 ತಂತ್ರಾಂಶದೊಂದಿಗೆ ಇ-ಆಸ್ತಿ ತಂತ್ರಾಂಶವನ್ನು ಸಂಯೋಜಿಸಲಾಗಿದ್ದು ಅಕ್ಟೋಬರ್ 07 ರಿಂದ ಅನ್ವಯವಾಗುವಂತೆ ಅನುಷ್ಟಾನಗೊಳಿಸಲಾಗಿದೆ.
ಸರ್ಕಾರದ ಸುತ್ತೋಲೆಯ ಸೂಚನೆ ಮೇರೆಗೆ ಶಿವಮೊಗ್ಗ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯ ಸ್ಥಿರಾಸ್ತಿಗಳ ನೋಂದಣಿಗೆ ಇ-ಆಸ್ತಿ ತಂತ್ರಾಂಶದಲ್ಲಿ ಮಾತ್ರ ಸ್ವತ್ತಿನ ನಮೂನೆ 2/3ನ್ನು ನೀಡಲು ಹಾಗೂ ಹಕ್ಕು ವರ್ಗಾವಣೆಗೆ ಕ್ರಮವಹಿಸಲು ಮತ್ತು ಇ-ಆಸ್ತಿ ತಂತ್ರಾಂಶವನ್ನು ಹೊರತುಪಡಿಸಿ ಭೌತಿಕವಾಗಿ ಹಾಗೂ ಖಾಸಗಿ ತಂತ್ರಾಂಶವನ್ನು ಬಳಕೆ ಮಾಡಿ ನಮೂನೆ 2/3ನ್ನು ನೀಡಬಾರದಾಗಿ ಆದೇಶವಾಗಿರುತ್ತದೆ.
ಈ ಹಿನ್ನೆಲೆಯಲ್ಲಿ ಅ.07 ರಿಂದ ಶಿವಮೊಗ್ಗ ನಗರ ವ್ಯಾಪ್ತಿಯಲ್ಲಿ ಸ್ವತ್ತಿನ ನಮೂನೆ 2/3ನ್ನು ಇ-ಆಸ್ತಿ ತಂತ್ರಾಂಶದಲ್ಲಿ ವಿತರಿಸಲಾಗುವುದು, ಸಾರ್ವಜನಿಕರು ಸಹಕರಿಸುವಂತೆ ಶಿವಮೊಗ್ಗ ಮಹಾನಗರ ಪಾಲಿಕೆ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
The property account in Shivamogga will now have to be acquired through the e-property software. Here is a notification issued by the Commissioner of Shivamogga city Corporation in this regard