SHIVAMOGGA | MALENADUTODAY NEWS | ಮಲೆನಾಡು ಟುಡೆ | Feb 1, 2025
ಶಿವಮೊಗ್ಗ | 2024 ರಲ್ಲಿ ನಡೆದ ಲೋಕಸಭಾ ಚುನಾವಣೆಯಲ್ಲಿ ಶಿವಮೊಗ್ಗದ ಕಮಿಷನರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದ ಮಾಯಣ್ಣಗೌಡರ್ ಅವರಿಗೆ ರಾಜ್ಯಮಟ್ಟದ ಅತ್ಯುತ್ತಮ ಚುನಾವಣಾಧಿಕಾರಿ ಎಂದು ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಪ್ರಶಸ್ತಿ ನೀಡಿ ಗೌರವಿಸಿದ್ದಾರೆ.
ಸರ್ ಪುಟ್ಟಣ್ಣ ಚೆಟ್ಟಿ ಟೌನ್ ಹಾಲ್ ಬೆಂಗಳೂರಿನಲ್ಲಿ ರಾಷ್ಟ್ರೀಯ ಮತದಾರಾರ ದಿನದ ಅಂಗವಾಗಿ ಚುನಾವಣೆ ಸಂದರ್ಭದಲ್ಲಿ ಉತ್ತಮವಾಗಿ ಕಾರ್ಯ ನಿರ್ವಹಿಸಿದ ಅಧಿಕಾರಿಗಳಿಗೆ ಗೌರವಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಚುನಾವಣೆ ವೇಳೆಯಲ್ಲಿ ಶಿವಮೊಗ್ಗದಲ್ಲಿ ನಗರಪಾಲಿಕೆ ಕಮಿಷನರ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಮಾಯಣ್ಣಗೌಡರ್ ಅವರ ಕೆಲಸವನ್ನು ಮೆಚ್ಚಿ ರಾಜ್ಯಮಟ್ಟದ ಅತ್ಯುತ್ತಮ ಚುನಾವಣಾಧಿಕಾರಿ ಎಂದು ಪ್ರಶಸ್ತಿ ನೀಡಲಾಗಿದೆ.ಇವರು ಪ್ರಸ್ತುತ ಮಂಡ್ಯದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ.
ಸುಮಾರವರಿಗೆ ಅತ್ಯುತ್ತಮ ಬೂತ್ ಮಟ್ಟದ ಅಧಿಕಾರಿ ಪ್ರಶಸ್ತಿ
2024 ರ ಲೋಕಸಭಾ ಚುನಾವಣೆಯಲ್ಲಿ ಬೂತ್ ಮಟ್ಟದ ಅಧಿಕಾರಿಯಾಗಿ ಕಾರ್ಯನಿರ್ವಹಿಸಿದ ಸುಮಾರವರಿಗೆ ರಾಜ್ಯಪಾಲರು ರಾಜ್ಯಮಟ್ಟದ ಅತ್ಯುತ್ತಮ ಬಿ.ಎಲ್.ಓ ಎಂದು ಪ್ರಶಸ್ತಿ ನೀಡಿ ಗೌರವಿಸಿದ್ದಾರೆ. ಅಂಗನವಾಡಿ ಟೀಚರ್ ಆಗಿರುವ ಇವರು ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಗಾಜನೂರು ಶಾಲೆಯ ಬೂತ್ ಮಟ್ಟದ ಅಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದರು.
SUMMARY | Governor Thaawar Chand Gehlot honoured Mayannagoudar with the best state-level returning officer.
KEYWORDS | Governor, Thaawar Chand Gehlot, Mayannagoudar, award,