SHIVAMOGGA | MALENADUTODAY NEWS
ಮಲೆನಾಡು ಟುಡೆ ಡಿಜಿಟಲ್ ನ್ಯೂಸ್ ಮೀಡಿಯಾ
Sep 23, 2024
ಕೇಂದ್ರ ರೈಲ್ವೆ ಮಂತ್ರಿ ವಿ ಸೋಮಣ್ಣ ಇದೇ ಸೆಪ್ಟೆಂಬರ್ 26 ರಂದು ಶಿವಮೊಗ್ಗಕ್ಕೆ ಆಗಮಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಶಿವಮೊಗ್ಗಕ್ಕೆ ವಂದೇ ಭಾರತ್ ಟ್ರೈನ್ ಒದಗಿಸುವ ಕುತೂಹಲ ಇನ್ನಷ್ಟು ಹೆಚ್ಚಾಗಿದೆ.
ಈಗಾಗಲೇ ಸಂಸದರು ಶಿವಮೊಗ್ಗಕ್ಕೆ ವಂದೇ ಭಾರತ್ ಟ್ರೈನ್ ಬರಲಿದೆ ಅಂತಾ ವಿಶ್ವಾಸ ವ್ಯಕ್ತಪಡಿಸಿದ್ದರು. ಇದೀಗ ಸಚಿವ ಸೋಮಣ್ಣ ಶಿವಮೊಗ್ಗ ಪ್ರವಾಸ ಕೈಗೊಂಡಿದ್ದು, ತಮ್ಮ ಭೇಟಿ ವೇಳೆ ಈ ಬಗ್ಗೆ ಅವರು ಪ್ರಸ್ತಾಪಿಸುವ ಸಾಧ್ಯತೆ ಇದೆ ಎನ್ನಲಾಗಿದೆ.
ಬರುವ 26 ರಂದು ಜಿಲ್ಲೆಗೆ ಬರಲಿರುವ ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಅಂದು ಬೆಳಗ್ಗೆ 10 ಕ್ಕೆ ಶಿವಮೊಗ್ಗ- ಶಿಕಾರಿಪುರ ರೈಲ್ವೆ ಮಾರ್ಗದ ಪರಿಶೀಲನೆ ನಡೆಸಲಿದ್ದಾರೆ.
ನಂತರ ಕೋಟೆಗಂಗೂರಿನಲ್ಲಿ ನಿರ್ಮಾಣವಾಗುತ್ತಿರುವ ಕೋಚಿಂಗ್ ಡಿಪೊ ಕಾಮಗಾರಿ ವೀಕ್ಷಿಸಲಿದ್ದಾರೆ.
ಮಧ್ಯಾಹ್ನ 12ರಿಂದ 1ರ ವರೆಗೆ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ರೈಲ್ವೆ ಅಧಿಕಾರಿಗಳು, ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಮಧ್ಯಾಹ್ನ 2ಕ್ಕೆ ಶಿವಮೊಗ್ಗದಿಂದ ಬೀರೂರಿಗೆ ತೆರಳಲಿದ್ದಾರೆ.