SHIVAMOGGA | MALENADUTODAY NEWS | ಮಲೆನಾಡು ಟುಡೆ
Oct 4, 2024 | ಬೆಂಗಳೂರು ನಲ್ಲಿ ಶಿವಮೊಗ್ಗ ಮೂಲದ ಧಾರವಾಹಿ ನಟಿಯೊಬ್ಬರ ಪ್ರೇಮ ಪ್ರಕರಣದಲ್ಲಿ ಆಕೆಯ ಪ್ರಿಯಕರನ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ವರದಿಯಾಗಿದೆ. ಬೆಂಗಳೂರು ಮಾಧ್ಯಮಗಳ ಪ್ರಕಾರ, ಶಿವಮೊಗ್ಗ ಜಿಲ್ಲೆಯ ನಟಿಯೊಬ್ಬರು ಬೆಂಗಳೂರಿನಲ್ಲಿ ವಿವಿಧ ಧಾರವಾಹಿಗಳಲ್ಲಿ ನಟಿಸುತ್ತಿದ್ದರು. ಅವರು ಇವೆಂಟ್ ಮ್ಯಾನೇಜ್‌ಮೆಂಟ್ ಮಾಡುತ್ತಿದ್ದ ಮದನ್ ಎಂಬವರೊಂದಿಗೆ ಪ್ರೀತಿಸುತ್ತಿದ್ದರು.
ಈ ನಡುವೆ ಯುವತಿ ಮದುವೆಯಾಗುವಂತೆ ಒತ್ತಡ ಹೇರಿದ್ದರಿಂದ ಯುವಕ ಬೇಸರಗೊಂಡಿದ್ದು ಕಳೆದ ಮಂಗಳವಾರ ಇಬ್ಬರ ನಡುವೆ ಗಲಾಟೆ ನಡೆದಿದೆ. ಇದೇ ದಿನ ಯುವಕ ನೇಣಿಗೆ ಶರಣಾಗಿದ್ದಾನೆ. ಈ ಸಂಬಂಧ ಹುಳಿಮಾವು ಪೊಲೀಸರು ಭಾರತೀಯ ನ್ಯಾಯ ಸಂಹಿತೆ (ಬಿಎನ್‌ಎಸ್) ಸೆಕ್ಷನ್ 108 ( ಆತ್ಮಹತ್ಯೆಗೆ ಪ್ರಚೋದನೆ ) ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ .
ಗಮನಕ್ಕೆ : ಆತ್ಮಹತ್ಯಾ ಆಲೋಚನೆಗಳನ್ನು ಹೊಂದಿದ್ದರೆ ಅಥವಾ ಭಾವನಾತ್ಮಕ ಬೆಂಬಲದ ಅಗತ್ಯವಿದ್ದರೆ, ಆತ್ಮಹತ್ಯೆ ತಡೆಗಟ್ಟುವಿಕೆ ಸಹಾಯವಾಣಿಗಳಿಗೆ ಕರೆ ಮಾಡಿ: ಟೆಲಿ-ಮಾನಸ್ ಸಹಾಯವಾಣಿ: 14416 ಅಥವಾ 1800-891-4416, SAHAI ಸಹಾಯವಾಣಿ: 080-25497777.