SHIVAMOGGA| MALENADUTODAY NEWS | ಮಲೆನಾಡು ಟುಡೆ Apr 7, 2025
ಶಿವಮೊಗ್ಗದಿಂದ ವಿಮಾನ ನಿಲ್ದಾಣಕ್ಕೆ ಬಸ್ ವ್ಯವಸ್ಥೆ ಇಲ್ಲ ಎಂಬ ದೂರಿಗೆ ಇದೀಗ ಸ್ಪಂದನೆ ವ್ಯಕ್ತವಾಗಿದೆ. ಶಿವಮೊಗ್ಗ ಏರ್ಪೋರ್ಟ್ಗೆ, ಶಿವಮೊಗ್ಗ ನಗರದಿಂದ 2 ಸಾರಿಗೆ ಬಸ್ಗಳ ಸಂಚಾರವನ್ನು ಕಲ್ಪಿಸಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಪ್ರಕಟಣೆ ನೀಡಿದೆ.
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಶಿವಮೊಗ್ಗ ವಿಭಾಗದಿಂದ ರಾಷ್ಟ್ರಕವಿ ಕುವೆಂಪು ವಿಮಾನ ನಿಲ್ದಾಣ/ಕಾಚಿನಕಟ್ಟೆಗೆ 2 ನಗರ ಸಾರಿಗೆ ಬಸ್ಗಳನ್ನು ಕಾರ್ಯಾಚರಣೆಗೊಳಿಸುತ್ತಿದೆ.
ಬಸ್ ಸಂಚಾರದ ಸಮಯ
ಶಿವಮೊಗ್ಗ ಬಸ್ ನಿಲ್ದಾಣದಿಂದ ಬೆಳಗ್ಗೆ 9.45, 10.00, 12.45, 02.00, 03.00 ಮತ್ತು 3.30ಕ್ಕೆ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಬಸ್ ಸಂಚಾರ ಆರಂಭವಾಗಲಿದೆ.
ಅದೇ ರೀತಿ ರಾಷ್ಟ್ರಕವಿ ಕುವೆಂಪು ವಿಮಾನ ನಿಲ್ದಾಣ/ಕಾಚಿನಕಟ್ಟೆಯಿಂದ ಬೆಳಗ್ಗೆ 10.40, 11.40, 01.30, 02.45, 3.35 ಹಾಗೂ 4.05 ರ ಸಮಯದಲ್ಲಿ ಶಿವಮೊಗ್ಗ ನಗರಕ್ಕೆ ಬಸ್ ಸಂಚಾರ ಇರಲಿದೆ.
ಈ ನಿಟ್ಟಿನಲ್ಲಿ ಸಾರ್ವಜನಿಕರು ಬಸ್ಗಳ ಸೌಲಭ್ಯವನ್ನು ಪಡೆದುಕೊಳ್ಳುವಂತೆ ಕರಾರಸಾನಿಯ ವಿಭಾಗೀಯ ನಿಯಂತ್ರಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.