ಶಿವಮೊಗ್ಗ ಸಿಟಿ ಲಾಡ್ಜ್‌ಗಳಿಗೆ ಪೊಲೀಸ್‌ ಅಧಿಕಾರಿಗಳ ಸರ್‌ಪ್ರೈಸ್‌ ವಿಸಿಟ್‌ | ಏನಿದು ವಿಶೇಷ

SHIVAMOGGA | MALENADUTODAY NEWS | ಮಲೆನಾಡು ಟುಡೆ  Jan 26, 2025 ‌‌ 

ಶಿವಮೊಗ್ಗ ಪೊಲೀಸ್‌ ಇಲಾಖೆ ನಿನ್ನೆದಿನದ ಶಿವಮೊಗ್ಗ ನಗರದ ವಿವಿಧ ಲಾಡ್ಜ್‌ಗಳಿಗೆ ದಿಢೀರ್‌ ಎಂಟ್ರಿಕೊಟ್ಟು ದಾಖಲಾತಿಗಳನ್ನ ಪರಿಶೀಲನೆ ನಡೆಸಿದೆ. ಶಿವಮೊಗ್ಗ ನಗರದ ಪೊಲೀಸ್‌ ಇನ್ಸ್‌ಪೆಕ್ಟರ್‌ ಹಾಗೂ ಸಬ್‌ ಇನ್‌ಸ್ಪೆಕ್ಟರ್‌ಗಳ ತಂಡ ನಗರ ವ್ಯಾಪ್ತಿಯಲ್ಲಿರುವ ಲಾಡ್ಜ್ ಗಳಿಗೆ ಭೇಟಿ ನೀಡಿ, ಲಾಡ್ಜ್ ಗಳಿಗೆ ಬಂದು ತಂಗಿರುವ ಗ್ರಾಹಕರ ಮಾಹಿತಿಯನ್ನು ಪರಿಶೀಲನೆ ನಡೆಸಿದೆ. 

 

ರಿಜಿಸ್ಟರ್ ನಲ್ಲಿ ನಮೂದು ಮಾಡಿರುವ ಅಂಶಗಳನ್ನು ಪರಿಶೀಲಿಸಿದ ಅಧಿಕಾರಿಗಳು ಲಾಡ್ಜ್ ಗಳಲ್ಲಿ ಸಿಸಿ ಟಿವಿ ಕ್ಯಾಮೆರಾಗಳನ್ನು ಅಳವಡಿಸಿರುವ ಬಗ್ಗೆ ಹಾಗೂ  ಅವುಗಳು ಸರಿಯಾದ ರೀತಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವುದನ್ನು ಮತ್ತು ಕಳೆದ 15 ದಿನಗಳಲ್ಲಿ ಲಾಡ್ಜ್ ಗಳಲ್ಲಿ  ಬಂದು ತಂಗಿದ್ದ ಗ್ರಾಹಕರ ಮಾಹಿತಿಯನ್ನು ಪರಿಶೀಲನೆ ಮಾಡಿದ್ದಾರೆ. 



 

ಲಾಡ್ಜ್ ಗಳ ವ್ಯವಸ್ಥಾಪಕರಿಗೆ ಲಾಡ್ಜ್ ಗಳಿಗೆ ಬರುವ ಗ್ರಾಹಕರುಗಳ ಹೆಸರು, ವಿಳಾಸ ಹಾಗೂ ಮೊಬೈಲ್ ನಂಬರ್ ಸೇರಿದತೆ ಸಂಪೂರ್ಣ ಮಾಹಿತಿಯನ್ನು ಪಡೆದು ರಿಜಿಸ್ಟರ್ ನಲ್ಲಿ ನಮೂದು ಮಾಡಲು ಸೂಚಿಸಿದ್ದಾರೆ. 

ಅಲ್ಲದೆ ಗ್ರಾಹಕರು ನೀಡುವ ಮೊಬೈಲ್ ಸಂಖ್ಯೆಯನ್ನು ಪರಿಶೀಲಿಸಿ ಅವರದ್ದೇ ಮೊಬೈಲ್ ನಂಬರ್ ಎಂದು ಖಚಿತ ಪಡಿಸಿಕೊಳ್ಳಬೇಕು

ಗ್ರಾಹಕರ ಐಡಿ ಕಾರ್ಡ್ ನ ಜೆರಾಕ್ಸ್ ಪ್ರತಿಯನ್ನು ಪಡೆಯಬೇಕು, ಲಾಡ್ಜ್ ಗೆ ಬರುವ ಗ್ರಾಹಕರ ತಂಗುವ ಉದ್ದೇಶವನ್ನು ಕೇಳಿ ಪಡೆದು ರಿಜಿಸ್ಟರ್ ನಲ್ಲಿ ನೋಂದಾಯಿಸಬೇಕು 

ಗ್ರಾಹಕರುಗಳ ಬಗ್ಗೆ ಯಾವುದೇ ಅನುಮಾನ ಕಂಡು ಬಂದಲ್ಲಿ ಕೂಡಲೇ ಹತ್ತಿರದ ಪೊಲೀಸ್ ಠಾಣೆಗೆ ಮಾಹಿತಿ ನೀಡುವಂತೆ ಸೂಚನೆಗಳನ್ನು ನೀಡಿದ್ದಾರೆ. 

SUMMARY |  Shivamogga Police Department conducted a surprise entry into various lodges in Shivamogga city yesterday and verified the records.

KEY WORDS | Shivamogga Police Department conducted a surprise visit, various lodges in Shivamogga  verified the records.

Leave a Comment