SHIVAMOGGA | MALENADUTODAY NEWS | ಮಲೆನಾಡು ಟುಡೆ | Jan 2, 2025
ಶಿವಮೊಗ್ಗ | ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ವತಿಯಿಂದ ಇಂದು ಸಂಸ್ಥಾಪಕರ ದಿನಾಚರಣೆಯನ್ನು ಸಂಘದ ಸಬಾಂಗಣದಲ್ಲಿ ಹಮ್ಮಿಕೊಳ್ಳಲಾಗಿತ್ತು. ಈ ಸಂದರ್ಭದಲ್ಲಿ ಸಂಸ್ಥೆಗೆ ಸೇವೆ ಸಲ್ಲಿಸಿದ ಮಾಜಿ ಅಧ್ಯಕ್ಷರುಗಳಾದ ಟಿ.ಆರ್.ಅಶ್ವತ್ಥ್ ನಾರಾಯಣ ಶೆಟ್ಟಿ, ಎಚ್.ಮಹೇಂದ್ರಪ್ಪ, ಡಿ.ಎಸ್.ಅರುಣ್, ಡಿ.ಎಂ.ಶಂಕರಪ್ಪ, ಜೆ.ಆರ್.ವಾಸುದೇವ್, ಎನ್.ಗೋಪಿನಾಥ್ ಅವರಿಗೆ ಸನ್ಮಾನಿಸಲಾಯಿತು.
ಈ ವೇಳೆ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆ ಅಧ್ಯಕ್ಷ ಎಂ.ಜಿ.ಬಾಲಕೃಷ್ಣ, ಎಫ್‌ಕೆಸಿಸಿಐ ಉಪಾಧ್ಯಕ್ಷ ಟಿ.ಸಾಯಿರಾಂ, ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಬಿ.ಗೋಪಿನಾಥ್, ಉಪಾಧ್ಯಕ್ಷ ಜಿ.ವಿಜಯಕುಮಾರ್, ಕಾರ್ಯದರ್ಶಿ ಎ.ಎಂ.ಸುರೇಶ್, ಸಹ ಕಾರ್ಯದರ್ಶಿ ಕೆ.ಎಸ್.ಸುಕುಮಾರ್, ಖಜಾಂಚಿ ಆರ್.ಮನೋಹರ್ ಮತ್ತಿತರರಿದ್ದರು.
SUMMARY | Shivamogga District Chamber of Commerce and Industry celebrated its founder’s day at the association’s premises here today
KEYWORDS | Shivamogga, founder’s day, kannada news,