ಸದನದಲ್ಲಿ ಸಿಎಂ ಸಿದ್ದರಾಮಯ್ಯರಿಂದ SSLC ಪರೀಕ್ಷೆಯ ಅಂಕದ ಬಗ್ಗೆ ಸ್ಪಷ್ಟನೆ

13

SHIVAMOGGA| MALENADUTODAY NEWS | ಮಲೆನಾಡು ಟುಡೆ  Mar 22, 2025 ‌‌ ‌‌

ಈಗಾಗಲೇ SSLC ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ. ಪರೀಕ್ಷೆಗಳು ಸುಗಮವಾಗಿ ಸಾಗುತ್ತಿದೆ. ಈ ನಿಟ್ಟಿನಲ್ಲಿ ನಿನ್ನೆ ದಿನ ಕಲಾಪದಲ್ಲಿಯು ಸಹ ಶಾಸಕ ಸದಸ್ಯರು  ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆಯುತ್ತಿರುವ ಮಕ್ಕಳಿಗೆ ಶುಭಕೋರಿದರು. 

ಸ್ಪೀಕರ್‌ ಯು ಟಿ ಖಾದರ್‌ ಪ್ರಸ್ತಾಪಿಸಿ ಮಂಡಿಸಿದ ಗೊತ್ತುವಳಿ ಮೇಲೆ ಸದಸ್ಯರು ಮಾತನಾಡಿದರು. ಇದೇ ಸಂದರ್ಭದಲ್ಲಿ ಸೋಶಿಯಲ್‌ ಮೀಡಿಯಾದಲ್ಲಿ ಪರೀಕ್ಷೆಯ ಬಗ್ಗೆ ದಾರಿತಪ್ಪಿಸುವ ವರದಿಗಳ ವಿರುದ್ಧ ಕ್ರಮಕ್ಕೆ ಆಗ್ರಹಿಸಿದರು. 

ಇನ್ನೂ  ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶುಭಕೋರಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಈ ವರ್ಷದಿಂದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಕೃಪಾಂಕ ಇಲ್ಲ. ಇದರಿಂದ ವಿದ್ಯಾರ್ಥಿಗಳ ನೈಜ ಸಾಮರ್ಥ್ಯ ಗೊತ್ತಾಗುತ್ತದೆ. ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳಿಗೆ ನನ್ನ ಶುಭ ಹಾರೈಕೆಗಳು ಎಂದರು 

ಕೋವಿಡ್‌ ಸಂದರ್ಭದಲ್ಲಿ ಕೃಪಾಂಕ ನೀಡುವ ಪರಿಪಾಟ ಆರಂಭಿಸಲಾಯಿತು. ಈ ವರ್ಷದಿಂದ ಅದನ್ನು ಸಂಪೂರ್ಣ ತೆಗೆದುಹಾಕಿದ್ದೇವೆ ಎಂದು ಸದನಕ್ಕೆ ತಿಳಿಸಿದರು. 

Chief Minister Siddaramaiah has said that there will be no grace mark for SSLC students from this year

Share This Article