SHIVAMOGGA | MALENADUTODAY NEWS | ಮಲೆನಾಡು ಟುಡೆ Jan 17, 2025
ಸರ್ಕಾರಿ ನೌಕರರಿಗೆ ಕೇಂದ್ರ ಸರ್ಕಾರ ಗುಡ್ನ್ಯೂಸ್ ನೀಡುತ್ತಿದೆ ಕೇಂದ್ರ ಸರ್ಕಾರಿ ನೌಕರರ ವೇತನ ಮತ್ತು ಪಿಂಚಣಿದಾರರ ಭತ್ಯೆಗಳನ್ನು ಪರಿಷ್ಕರಿಸಲು ಎಂಟನೇ ವೇತನ ಆಯೋಗ ರಚಿಸಲು ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ. ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಕ್ಯಾಬಿನೆಟ್ ಮೀಟಿಂಗ್ನಲ್ಲಿ ಈ ಬಗ್ಗೆ ನಿರ್ಣಯ ಕೈಗೊಳ್ಳಲಾಗಿದೆ. ಸಚಿವ ಸಂಪುಟ ಸಭೆಯ ತೀರ್ಮಾನವನ್ನು ವಾರ್ತಾ ಮತ್ತು ಪ್ರಸಾರ ಸಚಿವ ಅಶ್ವಿನಿ ವೈಷ್ಣವ್ ಮಾದ್ಯಮಗಳಿಗೆ ತಿಳಸಿದ್ದಾರೆ.
ಈಗಾಗಲೇ ಚಾಲ್ತಿಯಲ್ಲಿರುವ ಏಳನೇ ವೇತನ ಆಯೋಗದ ಅವಧಿ ಪೂರ್ಣಗೊಂಡಿಲ್ಲ. ಇದರ ಹೊರತಾಗಿ ಅವಧಿ ಮುಗಿಯುವ ಮೊದಲೇ ಹೊಸ ಶಿಫಾರಸುಗಳನ್ನು ಸ್ವೀಕರಿಸಲು ಕೇಂದ್ರ ಸರ್ಕಾರವು ಈ ನಿರ್ಧಾರವನ್ನು ಕೈಗೊಂಡಿದೆ. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರವಷ್ಟೆ ಅಲ್ಲದೆ ದೆಹಲಿ ಸರ್ಕಾರದ ನೌಕರರ ವೇತನವೂ ಪರಿಷ್ಕರಣೆ ಆಗಲಿದೆ. ಆಯೋಗದ ಶಿಫಾರಸುಗಳು ಜಾರಿಯಾದ ಬಳಿಕ ಕೇಂದ್ರ ಹಾಗೂ ದೆಹಲಿ ರಾಜ್ಯ ಸರ್ಕಾರದ 4 ಲಕ್ಷ ನೌಕರರ ವೇತನ ಪರಿಷ್ಕರಣೆ ಆಗಲಿದೆ.
SUMMARY | The Union Cabinet has approved the constitution of the Eighth Pay Commission to revise the salaries and allowances of central government employees and pensioners.
KEY WORDS | Union Cabinet , Eighth Pay Commission , salaries and allowances of central government employees