SHIVAMOGGA | MALENADUTODAY NEWS | ಮಲೆನಾಡು ಟುಡೆ Dec 23, 2024
ಶಿವಮೊಗ್ಗ ನಗರದ ಸರ್ಕಿಟ್ ಹೌಸ್ ಬಳಿಯಲ್ಲಿ ನಿನ್ನೆ ತಡರಾತ್ರಿ ಭೀಕರ ಅಪಘಾತ ಸಂಭವಿಸಿದೆ. ಅಪಘಾತದ ಘಟನೆಯಲ್ಲಿ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ. ಅವರುಗಳ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೆ ಲಭ್ಯವಾಗಬೇಕಿದೆ.
ನಡೆದಿದ್ದೇನು?
ನಿನ್ನೆ ರಾತ್ರಿ 11.30 ರ ಸುಮಾರಿಗೆ ಸರ್ಕಿಟ್ ಹೌಸ್ ಬಳಿಯಲ್ಲಿ ಸಾಗರ ಕಡೆಗೆ KTM ಬೈಕ್‌ನಲ್ಲಿ ಹೋಗುತ್ತಿದ್ದ ಯುವಕರು ಖಾಸಗಿ ಬಸ್‌ಗೆ ಡಿಕ್ಕಿ ಹೊಡೆದು ಸಾವನ್ನಪ್ಪಿದ್ದಾರೆ. ಸ್ಥಳದಲ್ಲಿಯೇ ಓರ್ವ ಸಾವನ್ನಪ್ಪಿದರೇ, ಇನ್ನೊಬ್ಬರು ಮೆಗ್ಗಾನ್ ಆಸ್ಪತ್ರೆಗೆ ಸಾಗಿಸುವ ಹೊತ್ತಿಗೆ ಸಾವನ್ನಪ್ಪಿದ್ದಾರೆ. ಇಬ್ಬರ ಮೃತದೇಹಗಳನ್ನ ಮೆಗ್ಗಾನ್ ಶವಾಗಾರದಲ್ಲಿ ಇರಿಸಲಾಗಿದೆ. ಅವರುಗಳ ಬಗ್ಗೆ ಇನ್ನಷ್ಟೆ ಮಾಹಿತಿ ಲಭ್ಯವಾಗಬೇಕಿದೆ.
SUMMARY | Two youths die after a KTM bike collides with a bus near Circuit House in Shivamogga city
KEY WORDS | KTM bike collides bus , Circuit House in Shivamogga city