SHIVAMOGGA | MALENADUTODAY NEWS | ಮಲೆನಾಡು ಟುಡೆ | Dec 17, 2024
ಶಿವಮೊಗ್ಗ | ನಗರದ ಪಶುವೈದ್ಯಕೀಯ ಮಹಾವಿದ್ಯಾಲಯದಲ್ಲಿ ಪ್ರಾಧ್ಯಾಪಕರ ಹುದ್ದೆಗೆ ಗುತ್ತಿಗೆ ಆಧಾರದಲ್ಲಿ ನೇಮಕ ಮಾಡಿಕೊಳ್ಳುತ್ತಿದ್ದು, ಡಿಸೆಂಬರ್ 23 ರಂದು ನೇರ ಸಂದರ್ಶನವನ್ನು ಏರ್ಪಡಿಸಲಾಗಿದೆ.
ವಿವಿಧ ವಿಭಾಗಳಲ್ಲಿ ಅಂದರೆ ಪ್ರಾಣಿ ಆಹಾರ ಶಾಸ್ತ್ರ ವಿಭಾಗ, ಪಶುವೈದ್ಯಕೀಯ ಔಷಧ ಹಾಗೂ ವಿಷಶಾಸ್ತ್ರ ವಿಭಾಗ, ಜಾನುವಾರು ಉತ್ಪನ್ನಗಳ ತಾಂತ್ರಿಕತೆ ವಿಭಾಗ, ಪಶುವೈದ್ಯಕೀಯ ಸಾರ್ವಜನಿಕ ಆರೋಗ್ಯ ಮತ್ತು ಸಮುದಾಯ ರೋಗ ಅಧ್ಯಯನ ಶಾಸ್ತ್ರ ವಿಭಾಗ, ಜಾನುವಾರು ಸಾಕಾಣಿಕಾ ಸಂಕೀರ್ಣ ವಿಭಾಗ, ಪಶುವೈದ್ಯಕೀಯ ಶರೀರಕ್ರಿಯಾ ಮತ್ತು ಜೀವರಸಾಯನ ಶಾಸ್ತ್ರ ವಿಭಾಗ, ಪಶುವೈದ್ಯಕೀಯ ಶಾಸ್ತ್ರ ಚಿಕಿತ್ಸೆ ಮತ್ತು ಕ್ಷ-ಕಿರಣ ಶಾಸ್ತ್ರ ವಿಭಾಗ, ಪಶು ವೈದ್ಯಕೀಯ ಚಿಕಿತ್ಸಾ ಸಂಕೀರ್ಣ ವಿಭಾಗಗಳಲ್ಲಿ ನೇಮಕ ಮಾಡಿಕೊಳ್ಳಲಾಗುತ್ತಿದೆ.

ಈ ನೇಮಕಾತಿಯ ನೇರ ಸಂದರ್ಶನ ಡಿಸೆಂಬರ್ 23 ರ ಬೆಳಿಗ್ಗೆ 11 ಗಂಟೆಯಿಂದ ನಡೆಯಲಿದ್ದು, ಸಂದರ್ಶನದಲ್ಲಿ ಆಯ್ಕೆಯಾದ ಹಾಗೂ ರಾಷ್ಟ್ರೀಯ ಅರ್ಹತಾ ಪರೀಕ್ಷೆ(ಎನ್‌ಇಟಿ) ಪ್ರಮಾಣ ಪತ್ರ ಹೊಂದಿರುವ ಅಭ್ಯರ್ಥಿಗಳಿಗೆ ಮಾಸಿಕ ರೂ.56,700/- ಮತ್ತು ರಾಷ್ಟ್ರೀಯ ಅರ್ಹತಾ ಪರೀಕ್ಷೆಯ (ಎನ್‌ಇಟಿ)ಪ್ರಮಾಣ ಪತ್ರ ಹೊಂದಿರದ ಅಭ್ಯರ್ಥಿಗಳಿಗೆ ಮಾಸಿಕ ರೂ.50,000 ವೇತನ ನೀಡಲಾಗುವುದು ಎಂದು ತಿಳಿಸಿದ್ದಾರೆ.
SUMMARY | The recruitment for the post of professor at the veterinary college in the city is being done on contract basis and a direct interview will be held on December 23.
KEYWORDS | veterinary college, interview, shivamogga,