SHIVAMOGGA | MALENADUTODAY NEWS | ಮಲೆನಾಡು ಟುಡೆ Oct 16, 2024
ಸಾಗರ | ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕು ಸಾಗರ ಪೇಟೆಯಲ್ಲಿರುವ ಕೋರ್ಟ್ ಆವರಣದ ಸಮೀಪ ವ್ಯಕ್ತಿಯೊಬ್ಬರು ವಿಷ ಸೇವಿಸಿರುವ ಬಗ್ಗೆ ವರದಿಯಾಗಿದೆ. ಸ್ಥಳೀಯ ಪತ್ರಿಕೆಯ ವರದಿ ಪ್ರಕಾರ, ಇಲ್ಲಿನ ಕೋರ್ಟ್ ಆವರಣದ ಬಳಿಯಲ್ಲಿ ವೀರಭದ್ರಪ್ಪ ಎಂಬವರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಅವರನ್ನ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಈ ಸಂಬಂಧ ಸಾಗರ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆಸ್ತಿ ವಿಷಯಕ್ಕೆ ಸಂಬಂಧಿಸಿದ ಪ್ರಕರಣ ಕೋರ್ಟ್‌ನಲ್ಲಿದ್ದು ಅದೇ ವಿಚಾರಕ್ಕೆ ಮನನೊಂದು ಅವರು ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎನ್ನಲಾಗಿದೆ.
SUMMARY | A man allegedly consumed poison near the court premises at in Sagaraa taluk of Shivamogga district. He has been admitted to The Meggan Hospital in Shivamogga and is undergoing treatment.
KEYWORDS | consumed poison, court premises, Sagara taluk of Shivamogga district , Meggan Hospital in Shivamogga ,