SHIVAMOGGA | MALENADUTODAY NEWS | Aug 20, 2024
ಬೈಕ್ ಡಿಕ್ಕಿ ಹೊಡೆದ ಪರಿಣಾಮ 35 ವರ್ಷದ ವ್ಯಕ್ತಿಯೊಬ್ಬರು ಸಾವನ್ನಪ್ಪಿರುವ ಘಟನೆ ಸಾಗರ ರೋಡ್ನ ಮಹೇಂದ್ರ ಶೋರೂಂ ಬಳಿ ನಡೆದಿದೆ.
ನಿಮ್ಮ ವಾಟ್ಸಾಪ್ನಲ್ಲಿ ನೋಡಿ, ಜಸ್ಟ್ ಒಂದು ಫಾಲೋ ಕೊಡಿ

ರಸ್ತೆ ದಾಟುತ್ತಿದ್ದ ವೇಳೆ ಘಟನೆ
ಸಾಗರ ರಸ್ತೆಯನ್ನು ದಾಟುತ್ತಿದ್ದ ವೇಳೆ ಬೈಕ್ವೊಂದು ಡಿಕ್ಕಿಯಾಗಿದೆ. ಪರಿಣಾಮ ಬೈಕ್ನಲ್ಲಿದ್ದ ಇಬ್ಬರು ಹಾಗೂ ರಸ್ತೆದಾಟುತ್ತಿದ್ದ ವ್ಯಕ್ತಿಯು ಗಂಭೀರವಾಗಿ ಗಾಯಗೊಂಡಿದ್ದರು. ಅವರನ್ನ ತಕ್ಷಣ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಆದರೆ ರಸ್ತೆ ದಾಟುವಾಗ ಬೈಕ್ ಡಿಕ್ಕಿಯಾಗಿ ಗಾಯಗೊಂಡಿದ್ದ ಸುಮಾರು 35 ವರ್ಷದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಅವರ ಗುರುತು ಪರಿಚಯ ಗೊತ್ತಾಗದ ಹಿನ್ನೆಲೆಯಲ್ಲಿ ಪೊಲೀಸರು ಪ್ರಕಟಣೆ ಹೊರಡಿಸಿದ್ದಾರೆ
ಪೊಲೀಸ್ ಪ್ರಕಟಣೆ
ಆ. 18 ರಂದು ಅಪರಿಚಿತ ವ್ಯಕ್ತಿ ಮೃತಪಟ್ಟಿದ್ದಾರೆ. ಅವರ ಚಹರೆ 5.8 ಅಡಿ ಎತ್ತರ, ಗೋಧಿ ಮೈಬಣ್ಣ, ದುಂಡುಮುಖ, ಸಾಧಾರಣ ಮೈಕಟ್ಟು ಹೊಂದಿದ್ದು, ಮೃತರ ಬಲಮುಂಗೈ ಒಳಭಾಗದಲ್ಲಿ ಅಮ್ಮ ಎಂಬ ಹಚ್ಚೆ ಗುರುತು ಇರುತ್ತದೆ ಎಂದು ಪೊಲೀಸರು ತಿಳಿಸಿದ್ದಾರೆ
ಮೈಮೇಲೆ ಕಪ್ಪು ಬಣ್ಣದ ತುಂಬು ತೋಳಿನ ಷರ್ಟ್, ನಶೆ ಬಣ್ಣದ ಟೀಶರ್ಟ್ ಹಾಗೂ ಕಪ್ಪು ಬಣ್ಣದ ಪ್ಯಾಂಟ್ ಧರಿಸಿರುತ್ತಾರೆ.
ಈ ವ್ಯಕ್ತಿಯ ವಾರಸ್ಸುದಾರರ ಬಗ್ಗೆ ಮಾಹಿತಿ ದೊರಕಿದಲ್ಲಿ ಪಶ್ಚಿಮ ಸಂಚಾರ ಪೊಲೀಸ್ ಠಾಣೆ ದೂ.ಸಂ.:08182-261417/ 9480803346/9480803309 ಗಳನ್ನು ಸಂಪರ್ಕಿಸುವಂತೆ ಪೊಲೀಸ್ ಪ್ರಕಟಣೆ ತಿಳಿಸಿದೆ.
ಇನ್ನಷ್ಟು ಸುದ್ದಿಗಳು
-
ಕೆಎಸ್ಆರ್ಟಿಸಿ ಬಸ್ಗೆ ಡಿಕ್ಕಿ | ಒಂದೇ ಕುಟುಂಬದ ನಾಲ್ವರ ದುರಂತ ಅಂತ್ಯ
-
ಜೋಗ್ಪಾಲ್ಸ್ ಗೆ ಹೋಗುವಾಗ ಇರಲಿ ಎಚ್ಚರ | ಪ್ರಯಾಣಿಕನ ಮೇಲೆಯೇ ಹರಿಯಿತು ಬಸ್ | ನಡೆದಿದ್ದೇನು?
-
Shikaripura | ಮಾಜಿ ಸಿಎಂ ಬಿಎಸ್ ಯಡಿಯೂರಪ್ಪನವರ ಮನೆಗೆ ಮುತ್ತಿಗೆ ಹಾಕಲು ಯತ್ನ |
-
ಗಣೇಶೋತ್ಸವ ಮತ್ತು ಈದ್ ಮಿಲಾದ್ ಹಿನ್ನೆಲೆಯಲ್ಲಿ | ಶಿವಮೊಗ್ಗ ಪೊಲೀಸ್ ಇಲಾಖೆಯಿಂದ ಏಳು ಪ್ರಮುಖ ಸೂಚನೆ
-
ಭದ್ರಾ ಭರ್ತಿ : ರೈತರ ಮೊಗದಲ್ಲಿ ಮಂದಹಾಸ | ಎಸ್ ಎಸ್ ಮಲ್ಲಿಕಾರ್ಜುನ್ ಹೇಳಿದ್ದೇನು?
-
ಹಾರು ಬೆಕ್ಕಿನ ಬೇಟೆ | ಹುಂಚಾ ಹೋಬಳಿಯಲ್ಲಿ ಸಿಕ್ಕಿಬಿದ್ದ ಆರೋಪಿ | ಅರಣ್ಯ ಇಲಾಖೆ ಕಾರ್ಯಾಚರಣೆ