SHIVAMOGGA | MALENADUTODAY NEWS | ಮಲೆನಾಡು ಟುಡೆ | Dec 20, 2024
ಶಿವಮೊಗ್ಗ | ವಿಧಾನಪರಿಷತ್ ಸದಸ್ಯ ಸಿ.ಟಿ ರವಿಯವರ ಮೇಲೆ ಆದ ಹಲ್ಲೆಯನ್ನು ವಿರೋದಿಸಿ ಇಂದು ಶಿವಮೊಗ್ಗದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಬಿಜೆಪಿ ಮುಖಂಡರು ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ ಮೇಘರಾಜ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ್ದಾರೆ.
ಮಹಿಳಾ ಮತ್ತು ಮಕ್ಕಳ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ದ ಅವಾಚ್ಯ ಶಬ್ದ ಬಳಸಿದ್ದಾರೆಂಬ ಆರೋಪದ ಮೇಲೆ ವಿಧಾನಪರಿಷತ್ ಸದಸ್ಯ ಸಿಟಿ ರವಿಯವರನ್ನ ಬಂಧಿಸಲಾಗಿದೆ. ಈ ನಡುವೆ ಅವರ ಬಂಧನದ ವೇಳೆ ಲಕ್ಷ್ಮೀ ಹೆಬ್ಬಾಳ್ಕರ್ರವರ ಬೆಂಬಲಿಗರು ಸಿ ಟಿ ರವಿಯವರ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಬಿಜೆಪಿಗರು ಆರೋಪಿಸಿದ್ದಾರೆ. ಈ ಹಿನ್ನಲೆ ಶಿವಮೊಗ್ಗದ ಬಿಜೆಪಿ ಮುಖಂಡರು, ಸಿಟಿ ರವಿಯವರ ಮೇಲೆ ಹಲ್ಲೆಗೆ ಮುಂದಾಗಿರೋದನ್ನ ಖಂಡಿಸಿ ಜಗ್ಗಲ್ಲ ಬಗ್ಗಲ್ಲ ಕೇಸ್ಗೆ ಹೆದರಲ್ಲ ಎಂದು ರಾಜ್ಯ ಸರ್ಕಾರದ ವಿರುದ್ದ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಪ್ರತಿಭಟನೆಯಲ್ಲಿ ಶಾಸಕ ಚನ್ನಬಸಪ್ಪ, ಎಂಎಲ್ಸಿ ಧನಂಜಯ ಸರ್ಜಿ ಸೇರಿ ಬಿಜೆಪಿ ಮುಖಂಡರು ಭಾಗಿಯಾಗಿದ್ದರು.

SUMMARY | Bjp leaders, led by BJP district president TD Meghraj, staged a protest in front of the Deputy Commissioner’s office in today against the attack on MLC CT Ravi.
KEYWORDS | Bjp, protested, Deputy Commissioner’s office, Shivamogga, MLC CT Ravi,