SHIVAMOGGA | MALENADUTODAY NEWS | ಮಲೆನಾಡು ಟುಡೆ Feb 22, 2025
ಶಿವಮೊಗ್ಗ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಇವತ್ತು ಶಿವಮೊಗ್ಗ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಇವತ್ತಿನಿಂದ ಮೂರು ದಿನಗಳ ಕಾಲ ಅವರು ಶಿವಮೊಗ್ಗದಲ್ಲಿ ಇರಲಿದ್ದಾರೆ.
ಇವತ್ತು ಗಿಣಿಗೇರಾ ವಿಮಾನ ನಿಲ್ದಾಣದಿಂದ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಮಧ್ಯಾಹ್ನ ಮೂರು ಗಂಟೆಗೆ ಶಿವಮೊಗ್ಗಕ್ಕೆ ಬರಲಿದ್ದಾರೆ. ಆನಂತರ ಹೊಸನಗರಕ್ಕೆ ತೆರಳಲಿದ್ದು, ಅಲ್ಲಿ ಸಂಜೆ ನಡೆಯಲಿರುವ ಸಂಗೀತ ಸಂಜೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.
ಶನಿವಾರ ಬೆಳಿಗ್ಗೆ 10ಕ್ಕೆ ಅಂಬೇಡ್ಕರ್ ಭವನದಲ್ಲಿ ಸಂವಿಧಾನ ರಕ್ಷಿಸಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರ ಅವರು,11.30ಕ್ಕೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ. ಸಂಜೆ 4ಕ್ಕೆ ತೀರ್ಥಹಳ್ಳಿ ತಾಲ್ಲೂಕಿನ ತೂದೂರಿನಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಲಿದ್ದಾರೆ. ಸಂಜೆ 5ಕ್ಕೆ ಬೇಗುವಳ್ಳಿ ಶಾಲೆಯ ಹಕ್ಕುಪತ್ರ ಹಸ್ತಾಂತರ ಕಾರ್ಯಕ್ರಮ ನಡೆಯಲಿದೆ.
ಸಂಜೆ 7.30ಕ್ಕೆ ಸಾಗರದ ನೆಹರು ಮೈದಾನದಲ್ಲಿ ಶಾಸಕ ಗೋಪಾಲಕೃಷ್ಣ ಬೇಳೂರು ಹುಟ್ಟುಹಬ್ಬ ಕಾರ್ಯಕ್ರಮದಲ್ಲಿ ಭಾಗವಹಿಸುವರು. ರಾತ್ರಿ 9.30ಕ್ಕೆ ಗೋಪಾಲಗೌಡ ಬಡಾವಣೆಯಲ್ಲಿ ಸಿದ್ಧಿವಿನಾಯಕ ಕಪ್ ವಾಲಿಬಾಲ್ ಪಂದ್ಯಾವಳಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಫೆ. 23ರಂದು ಬೆಳಿಗ್ಗೆ 10ಕ್ಕೆ ಶಿವಮೊಗ್ಗದ ಮಲೆನಾಡು ದೇವಾಂಗ ಸಮಾಜದ ಸುವರ್ಣ ಮಹೋತ್ಸವ, ಮಧ್ಯಾಹ್ನ 12ಕ್ಕೆ ಸೊರಬ ತಾಲ್ಲೂಕಿನ ಮಳಲಗದ್ದೆ ಸರ್ಕಾರಿ ಶಾಲೆಯ ಹೆಚ್ಚುವರಿ ಕಟ್ಟಡದ ಭೂಮಿ ಪೂಜೆಯಲ್ಲಿ ಪಾಲ್ಗೊಳ್ಳಲಿರುವ ಸಚಿವರು ಫೆಬ್ರವರಿ 24ರಂದು ಬೆಳಿಗ್ಗೆ 10.30ಕ್ಕೆ ಎನ್‌ಇಎಸ್ ಆವರಣದಲ್ಲಿ ಉದ್ಯೋಗ ಮೇಳಕ್ಕೆ ಚಾಲನೆ ನೀಡಲಿದ್ದಾರೆ. ಬಳಿಕ ಮಧ್ಯಾಹ್ನ 12ಕ್ಕೆ ‘ನಮ್ಮ ಶಾಲೆ ನಮ್ಮ ಜವಾಬ್ದಾರಿ’ ಕುರಿತು ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಸಭೆ ನಡೆಸಲಿದ್ದಾರೆ.
SUMMARY | madhu bangarappa tour program in shivamogga
KEY WORDS | madhu bangarappa