ಸ್ಯಾಂಡಲ್‌ವುಡ್‌ನ ಖ್ಯಾತ ಹಾಸ್ಯ ನಟ ನಿಧನ

131

SHIVAMOGGA | MALENADUTODAY NEWS | ಮಲೆನಾಡು ಟುಡೆ |‌ Jan 15, 2025

ಕನ್ನಡ ಚಿತ್ರರಂಗದ ಪ್ರತಿಭಾನ್ವಿತ ಹಿರಿಯ ಹಾಸ್ಯ ನಟ ಸರಿಗಮ ವಿಜಿ ಇಂದು ಬೆಂಗಳೂರಿನ ಮಣಿಪಾಲ್‌ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

76 ವರ್ಷ ವಯಸ್ಸಿನ ಸರಿಗಮ ವಿಜಿ ಕಳೆದ ಕೆಲ ದಿನಗಳಿಂದ ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು. ಹಾಗಾಗಿ ಅವರನ್ನು ಬೆಂಗಳೂರಿನ ಮಣಿಪಾಲ್‌  ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಿಗ್ಗೆ 9:45 ಕ್ಕೆ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಇವರು 1975 ರಲ್ಲಿ ಕನ್ನಡ ಚಿತ್ರರಂಗವನ್ನು ಪ್ರವೇಶಿಸಿ  2018 ರ ವರೆಗೆ ಒಟ್ಟು 269 ಚಿತ್ರಗಳಲ್ಲಿ ನಟಿಸಿದ್ದಾರೆ.

SUMMARY | Veteran Kannada comedian Sarigama Viji passed away today at Manipal Hospital in Bengaluru.

KEYWORDS | Sarigama Viji, Kannada comedian, passed away,

Share This Article