SHIVAMOGGA| MALENADUTODAY NEWS | ಮಲೆನಾಡು ಟುಡೆ Mar 5, 2025
ಇದೀಗ ರಾಜ್ಯದ ಹಲವೆಡೆ ಹಕ್ಕಿಜ್ವರ ಭೀತಿ ಎದುರಾಗಿದ್ದು ಹಲವೆಡೆ ಕೋಳಿಗಳನ್ನು ಸಂಹಾರ ಮಾಡಲಾಗುತ್ತಿದೆ. ಈ ನಿಟ್ಟಿನಲ್ಲಿ ಶಿವಮೊಗ್ಗದಲ್ಲಿ ಕೋಳಿ ಶೀತಜ್ವರದ ಬಗ್ಗೆ ಆತಂಕ ಪಡುವ ಅಗತ್ಯವಿಲ್ಲ ಎಂದು ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ಆಡಳಿತ ಉಪ ನಿರ್ದೇಶಕ ಡಾ.ಎ.ಬಾಬುರತ್ನ ತಿಳಿಸಿದ್ದಾರೆ.
ಈ ಬಗ್ಗೆ ನಿನ್ನೆ ಪಶುಸಂಗೋಪನಾ ಹಾಗೂ ರೇಷ್ಮೆ ಸಚಿವರ ಅಧ್ಯಕ್ಷತೆಯಲ್ಲಿ ಏರ್ಪಡಿಸಿದ್ದ ವರ್ಚುವಲ್ ಸಭೆಯಲ್ಲಿ ಮಾತನಾಡಿರುವ ಅವರು,ರಾಜ್ಯದ ಬಳ್ಳಾರಿ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಹಕ್ಕಿಜ್ವರ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲೆಯಲ್ಲೂ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ ಎಂದಿದ್ದಾರೆ.
ಈ ಕಾರಣ, ಸಾರ್ವಜನಿಕರು ಯಾವುದೇ ಆತಂಕಕ್ಕೆ ಒಳಾಗಬಾರದು ಎಂದು ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ಆಡಳಿತ ಉಪ ನಿರ್ದೇಶಕ ಡಾ.ಎ.ಬಾಬುರತ್ನ ತಿಳಿಸಿದರು.
ಜಿಲ್ಲೆಯಲ್ಲಿ ಒಟ್ಟು 332 ಕೋಳಿ ಫಾರಂಗಳಿದ್ದು, ಈ ಫಾರಂಗಳಲ್ಲಿ ಒಟ್ಟು 1741650 ಕೋಳಿಗಳ ಸಾಕಾಣಿಕ ಮಾಡಲಾಗಿದೆ. ಆದರೂ ಇದುವರೆಗೂ ಜಿಲ್ಲೆಯಲ್ಲಿ ಯಾವುದೇ ಹಕ್ಕಿಜ್ವರ ಪ್ರಕರಣ ವರದಿಯಾಗಿಲ್ಲ.
ಈ ವರ್ಷದಲ್ಲಿ 476 ಕೋಳಿಗಳ ಮಾದರಿ ಗಳನ್ನು ತಪಾಸಣೆಗೆ ಒಳಪಡಿಸಲಾಗಿದೆ ಎಂದರು. ಸಾಮೂಹಿಕ ಕೋಳಿಗಳು ಸಾವನ್ನಪ್ಪಿದರೆ ಕೂಡಲೇ ಕೋಳಿ ಫಾರಂ ಮಾಲೀಕರಿಗೆ ಹಾಗೂ ಸಾರ್ವಜ ನಿಕರು ಹತ್ತಿರದ ಪಶುವೈದ್ಯ ಸಂಸ್ಥೆಗೆ ಮಾಹಿತಿ ನೀಡಬೇಕು, ಪ್ರಕರಣ ಕಂಡಬಂದಲ್ಲಿ ತಕ್ಷಣ ವೈಜ್ಞಾನಿಕ ವಿಲೇವಾರಿ ಮಾಡಕೊಳ್ಳಲಾಗಿದೆ ಎಂದರು.