SHIVAMOGGA | MALENADUTODAY NEWS | ಮಲೆನಾಡು ಟುಡೆ Dec 11, 2024
ಶಿವಮೊಗ್ಗ ಜಿಲ್ಲೆ ಹೊಸನಗರ ತಾಲ್ಲೂಕು ಸೂಡೂರು ಗೇಟ್ ಬಳಿ ಭೀಕರ ಅಪಘಾತ ಸಂಭವಿಸಿದೆ. ಕಾರು ಹಾಗೂ ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಮೂವರು ಯುವಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಂಭೀರವಾಗಿ ಗಾಯಗೊಂಡ ಯುವಕರು ರಸ್ತೆಯಲ್ಲಿ ಒದ್ದಾಡುತ್ತಿರುವ ದೃಶ್ಯ ಕಾಣುತ್ತಿದೆ. ಘಟನೆಯಲ್ಲಿ ಗಾಯಗೊಂಡವರ ಬಗ್ಗೆ ಇನ್ನಷ್ಟೆ ಲಭ್ಯವಾಗಬೇಕಿದೆ.
ಇನ್ನೂ ಮೂಲಗಳ ಪ್ರಕಾರ, ಓರ್ವ ಯುವಕ ಸಾವನ್ನಪ್ಪಿದ್ದಾನೆ ಎನ್ನಲಾಗುತ್ತಿದೆ. ರಿಪ್ಪನ್‌ಪೇಟೆ ಕಡೆಯಿಂದ ಶಿವಮೊಗ್ಗಕ್ಕೆ ಬರುತ್ತಿದ್ದ ಮಾರುತಿ ಆಲ್ಟೋ ಕಾರು ಹಾಗೂ ರಿಪ್ಪನ್‌ಪೇಟೆ ಕಡೆಗೆ ಹೋಗುತ್ತಿದ್ದ ಬೈಕ್‌ಗೆ ಡಿಕ್ಕಿಯಾಗಿದೆ. ಈ ಬಗ್ಗೆ ಇನ್ನಷ್ಟು ಮಾಹಿತಿ ಲಭ್ಯವಾಗಬೇಕಿದೆ.
SUMMARY | Bike Alto car collides near Sudur gate in Hosanagara taluk
KEY WORDS | Bike Alto car collides, Sudur gate in Hosanagara taluk