SHIVAMOGGA | MALENADUTODAY NEWS | ಮಲೆನಾಡು ಟುಡೆ Feb 4, 2025
ಶಿವಮೊಗ್ಗ ಹೌಸಿಂಗ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಸದಸ್ಯತ್ವ ಹೊಂದಿದವರಿಗೆ ಸಂಘದ ಅಧ್ಯಕ್ಷ ಎಸ್ ಕೆ ಮರಿಯಪ್ಪ ಮಹತ್ವದ ಸಂದೇಶವೊಂದನ್ನ ರವಾನಿಸಿದ್ದಾರೆ. ಸಂಘದ ಸದಸ್ಯರಿಗೆ ಯಶಸ್ವಿನಿ ಯೋಜನೆ ನೋಂದಾಯಿಸುವ ಅವಧಿ ವಿಸ್ತರಣೆ ಮಾಡಲಾಗಿದೆ. ಕರ್ನಾಟಕ ರಾಜ್ಯ ಸರ್ಕಾರದ ಆದೇಶದೊಂದಿಗೆ ಅವಧಿಯನ್ನು ವಿಸ್ತರಣೆ ಮಾಡಲಾಗಿದ್ದು, ಈ ಸಂಬಂಧ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಶಿವಮೊಗ್ಗ ಹೌಸಿಂಗ್ ಕೋ ಆಪರೇಟಿವ್ ಸೊಸೈಟಿ ನಿ.
ಶಿವಮೊಗ್ಗ ಹೌಸಿಂಗ್ ಕೋ ಆಪರೇಟಿವ್ ಸೊಸೈಟಿ ನಿ. ಸಂಘದ ಸದಸ್ಯರುಗಳಿಗಾಗಿ ಕರ್ನಾಟಕ ಸರ್ಕಾರದ ಆದೇಶದ ಮೇರೆಗೆ ಯಶಸ್ವಿನಿ ಯೋಜನೆಯ ನೋಂದಾಯಿಸುವ ಅವಧಿಯನ್ನು ಮಾರ್ಚ್ 31 ರವರೆಗೆ ವಿಸ್ತರಣೆಗೊಳಿಸಲಾಗಿದ್ದು, ಸಂಘದ ಸದಸ್ಯರು ಯೋಜನೆಯ ಸದಸ್ಯತ್ವ ಪಡೆದು ತಮ್ಮ ಕುಟುಂಬ ಆರೋಗ್ಯ ರಕ್ಷಣೆ ಮಾಡಿಕೊಳ್ಳಬೇಕು. ಈಗಾಗಲೇ ಈ ಯೋಜನೆಯ ಸದಸ್ಯತ್ವ ಪಡೆದವರಿಗೆ ಮತ್ತು ಹೊಸದಾಗಿ ನೋಂದಣಿ ಮಾಡಿಕೊಳ್ಳುವ 4 ಜನ ಕುಟುಂಬ ಸದಸ್ಯರಿಗೆ ರೂ.1000 ನಂತರ ಪ್ರತಿ ಸದಸ್ಯರಿಗೆ ರೂ.200 ಇದ್ದು, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ಸದಸ್ಯರುಗಳಿಗೆ ಯಾವುದೇ ವಂತಿಕೆ ಇರುವುದಿಲ್ಲ. ಹೆಚ್ಚಿನ ಮಾಹಿತಿಗಾಗಿ ಸಂಘದ ಕಛೇರಿ ವೇಳೆಯಲ್ಲಿ ಸಂಪರ್ಕಿಸಲು ಸಂಘದ ಅಧ್ಯಕ್ಷ ಎಸ್.ಕೆ.ಮರಿಯಪ್ಪ ರವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
SUMMARY | Shimoga Housing Cooperative Society, Yashaswini Scheme
KEY WORDS | Shimoga Housing Cooperative Society, Yashaswini Scheme