SHIVAMOGGA | MALENADUTODAY NEWS | ಮಲೆನಾಡು ಟುಡೆ Dec 22, 2024
ಚಿಕ್ಕಮಗಳೂರು ನಗರದಲ್ಲಿ ಮಾಜಿ ಸಚಿವ ಸಿಟಿ ರವಿ ಬಂಧನ ಖಂಡಿಸಿ ಪ್ರತಿಭಟಿಸಿದ ನೂರಕ್ಕೂ ಹೆಚ್ಚು ಬಿಜೆಪಿ ಕಾರ್ಯಕರ್ತರ ವಿರುದ್ಧ ಕೇಸ್ ದಾಖಲಿಸಲಾಗಿದೆ. ಜಿಲ್ಲಾ ಘಟಕದ ಅಧ್ಯಕ್ಷ ದೇವರಾಜ್ ಶೆಟ್ಟಿ, ಯುವಮೋರ್ಚಾ ಜಿಲ್ಲಾಧ್ಯಕ್ಷ ಸಂತೋಷ್ ಸೇರಿದಂತೆ 100ಕ್ಕೂ ಹೆಚ್ಚು ಬಿಜೆಪಿ ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲಾಗಿದೆ. ಬಸವನಹಳ್ಳಿ ಪೊಲೀಸ್ ಠಾಣೆಯಲ್ಲಿ ಐದು ಮತ್ತು ನಗರ ಪೊಲೀಸ್ ಠಾಣೆಯಲ್ಲಿ ಮೂರು ಪ್ರಕರಣಗಳು ಈ ಸಂಬಂಧ ದಾಖಲಾಗಿದೆ. ಪ್ರತಿಭಟನಾಕಾರರ ವಿರುದ್ಧ ಸ್ವಯಂಪ್ರೇರಿತ ಸುಮುಟೋ ಕೇಸ್ ದಾಖಲಿಸಿರುವ ಪೊಲೀಸರು, ಅನುಮತಿಯಿಲ್ಲದೆ ಅಂಗಡಿ ಮುಂಗಟ್ಟುಗಳನ್ನು ಬಲವಂತವಾಗಿ ಮುಚ್ಚಿಸಿದ ಹಾಗೂ ಬೈಕ್ ಮತ್ತು ಟೈರ್‌ಗಳನ್ನು ಸುಟ್ಟುಹಾಕಿದ, ಹೆದ್ದಾರಿಗಳನ್ನು ಬಂದ್ ಮಾಡಿದ ಹಾಗೂ ಸಾರ್ವಜನಿಕ ಶಾಂತಿಗೆ ಭಂಗ ತಂದೆ ಆರೋಪ ಹೊರಿಸಿದ್ದಾರೆ.
SUMMARY | Suo motu case registered against over 100 BJP workers in Chikkamagaluru city


KEY WORDS | Suo motu case, case against over 100 BJP workers ,Chikkamagaluru city