ಭದ್ರಾ ಜಲಾಶಯದಿಂದ ತುಂಗಭದ್ರಾ ನದಿಗೆ 12 ಸಾವಿರ ಕ್ಯೂಸೆಕ್​ ನೀರು ಬಿಡುಗಡೆ! ಸಾರ್ವಜನಿಕರಿಗೆ ಎಚ್ಚರಿಕೆ !

12,000 cusecs of water released from Bhadra reservoir to Tungabhadra river Warning to the public | Sri Mylaralingeswara Swamy Annual Karnikotsava of Mylara village in Hoovina hadagali taluk

ಭದ್ರಾ ಜಲಾಶಯದಿಂದ ತುಂಗಭದ್ರಾ ನದಿಗೆ 12 ಸಾವಿರ ಕ್ಯೂಸೆಕ್​ ನೀರು ಬಿಡುಗಡೆ! ಸಾರ್ವಜನಿಕರಿಗೆ ಎಚ್ಚರಿಕೆ !
12,000 cusecs of water released from Bhadra reservoir to Tungabhadra river Warning to the public!

Shivamogga | Feb 1, 2024 | ಭದ್ರಾ ಜಲಾಶಯದಿಂದ ತುಂಗ-ಭದ್ರಾ ನದಿಗೆ ನೀರು ಬಿಡಲಾಗುತ್ತಿದ್ದು, ಈ ನಿಟ್ಟಿನಲ್ಲಿ ನದಿ ದಂಡೆಯ ಸಾರ್ವಜನಿಕರು ಎಚ್ಚರಿಕೆಯಿಂದಿರಲು ಸೂಚನೆ ನೀಡಲಾಗಿದೆ. ತತ್ಸಂಬಂಧ ಪ್ರಕಟಣೆಯನ್ನು ಸಹ ಹೊರಡಿಸಲಾಗಿದೆ. 

2023-24ನೇ ಸಾಲಿನಲ್ಲಿ ಭದ್ರಾ ಜಲಾಶಯದಿಂದ ನದಿಯ ಮೂಲಕ ಹಾವೇರಿ, ಗದಗ ಮತ್ತು ವಿಜಯನಗರ ಜಿಲ್ಲೆಯ ವ್ಯಾಪ್ತಿಗೆ ಬರುವ ಗದಗ, ಬೆಟಗೇರಿ, ಹಾವೇರಿ, ರಾಣೇಬೆನ್ನೂರು, ಬ್ಯಾಡಗಿ, ಕೂಡ್ಲಗಿ, ಕೊಟ್ಟೂರು, ಹಗರಿಬೊಮ್ಮನಹಳ್ಳಿ ಮತ್ತು ಹಿರೇಕೆರೂರು ಪಟ್ಟಣಗಳಿಗೆ ಅಲ್ಲದೇ ನದಿಯ ಪಕ್ಕದಲ್ಲಿ ಬರುವ ಗ್ರಾಮಗಳಿಗೆ ಬಹುಗ್ರಾಮ ನದಿ ನೀರು ಯೋಜನೆಯಡಿ ಕುಡಿಯುವ ನೀರು ಒದಗಿಸಲು ಮತ್ತು ವಿಜಯನಗರ ಜಿಲ್ಲೆ, ಹೂವಿನಹಡಗಲಿ ತಾಲ್ಲೂಕಿನ ಮೈಲಾರ ಗ್ರಾಮದ ಶ್ರೀ ಮೈಲಾರಲಿಂಗೇಶ್ವರ ಸ್ವಾಮಿ ವಾರ್ಷಿಕ ಕಾರ್ಣಿಕೋತ್ಸವ  (Mylaralingeswara Swamy Annual Karnikotsava ) ಪ್ರಯುಕ್ತ ತುಂಗ-ಭದ್ರಾ ನದಿಗೆ ದಿನಾಂಕ: 05-02-2024 ರ ರಾತ್ರಿ 10.00 ರಿಂದ 10-02-2024 ರ ರಾತ್ರಿ 10 ಗಂಟೆಯವರೆಗೆ ಪ್ರತಿ ದಿನ 2000 ಕ್ಯೂಸೆಕ್ಸ್‍ನಂತೆ ಒಟ್ಟು 12000 ಕ್ಯೂಸೆಕ್ಸ್ ನೀರನ್ನು ಹರಿಸಲಾಗುವುದು ಎಂ.ದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.  

 ಈ ಅವಧಿಯಲ್ಲಿ ನದಿಯಲ್ಲಿ ಸಾರ್ವಜನಿಕರು ಮತ್ತು ರೈತರು ತಿರುಗಾಡುವುದು, ದನ ಕರುಗಳನ್ನು ಮೇಯಿಸುವುದು ಮತ್ತು ತೋಟಗಾರಿಕೆ ಸಂಬಂಧಿಸಿದ ಕೆಲಸ ಮಾಡುವುದು ಇತ್ಯಾದಿಗಳನ್ನು ನಿಷೇಧಿಸಲಾಗಿದೆ. ಸಾರ್ವಜನಿಕರು ಮತ್ತು ರೈತರು ನದಿ ದಂಡೆಯಲ್ಲಿ ಪಂಪ್‍ಸೆಟ್ ಅಳವಡಿಸುವುದು ಮತ್ತು ಅನಧಿಕೃತವಾಗಿ ನೀರೆತ್ತುವುದನ್ನು ನಿಷೇಧಿಸಲಾಗಿದೆ ಎಂದು ಕರ್ನಾಟಕ ನೀರಾವರಿ ನಿಗಮದ ಅಧೀಕ್ಷಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.