RAIN NEWS LIVE

ಶಿವಮೊಗ್ಗವೂ ಸೇರಿದಂತೆ ರಾಜ್ಯದ ಹಲವೆಡೆ 3 ದಿನ ಮಳೆಯಿದೆ! ಮಾಹಿತಿ ಓದಿ

ajjimane ganesh ಅಥಾರಿಟಿ: ಮಲೆನಾಡು ಟುಡೆ ಡೆಸ್ಕ್

yellow alert / ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ / ಮಳೆವರದಿ / ಶಿವಮೊಗ್ಗವೂ ಸೇರಿದಂಥೆ ರಾಜ್ಯದ ಪ್ರಮುಖ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಅಂತಾ ಹವಾಮಾನ ಇಲಾಖೆ ಹೇಳಿದೆ. ಈ ಸಂಬಂದ ಹವಾಮಾನ ಇಲಾಖೆಯ ಬುಲೆಟಿನ್ ಪ್ರಕಾರ, ಇವತ್ತಿಂದ ಅಂದರೆ ಸೋಮವಾರದಿಂದ ಮುಂದಿನ ಮೂರು ದಿನ ಭಾರಿ ಮಳೆಯಾಗುವ ಸಾಧ್ಯತೆಯಿದೆಯಂತೆ.

ಈ ಬಗ್ಗೆ ಹವಾಮಾನ ಇಲಾಖೆ ಮುನೂಚನೆ ನೀಡಿದೆ. ಮೇಲಾಗಿ ಇವತ್ತು ಅಂದರೆ, ಸೋಮವಾರ 13 ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್ (yellow alert) ಘೋಷಿಸಲಾಗಿದೆ. ಕರಾವಳಿಯ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಒಂದೆರಡು ಕಡೆ ಮುಂದಿನ ಒಂದು ವಾರ ಭಾರಿ ಮಳೆಯಾಗುವ ಸಾಧ್ಯತೆಯಿದೆ.

ಇನ್ನೂ ಉತ್ತರ ಕನ್ನಡ ಜಿಲ್ಲೆಗೂ ಯೆಲ್ಲೊ ಅಲರ್ಟ್ ಘೋಷಿಸಲಾಗಿದೆ.ಉತ್ತರ ಒಳನಾಡಿನ ಧಾರವಾಡ, ಹಾವೇರಿ, ಬೆಳಗಾವಿ ಮತ್ತು ಕೊಪ್ಪಳ ಜಿಲ್ಲೆಯ ಒಂದೆರಡು ಕಡೆ ಸೋಮವಾರ ಭಾರಿ ಮಳೆಯಾಗುವ ಸಾಧ್ಯತೆಯಿದೆ ಅಂತಾ ತಿಳಿಸಲಾಗಿದೆ. ಇಷ್ಟೆ ಅಲ್ಲದೆ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಬಳ್ಳಾರಿ, ವಿಜಯನಗರ, ಚಿತ್ರದುರ್ಗ ಜಿಲ್ಲೆಯಲ್ಲಿ ಮಳೆ ಅಬ್ಬರದ ಸೂಚನೆ ನೀಡಲಾಗಿದೆ.

ಈ ಸಂಬಂಧ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ನಿರ್ವಹಣಾ ಕೇಂದ್ರದ ಟ್ವೀಟ್ ಇಲ್ಲಿದೆ ಗಮನಿಸಿ

Related News

🔔 Breaking News Alerts

ತಾಜಾ ಸುದ್ದಿಗಳನ್ನು ಮೊದಲು ಪಡೆಯಲು ನಮ್ಮ ನೋಟಿಫಿಕೇಶನ್ ಸೇವೆಯನ್ನು ಸಬ್‌ಸ್ಕ್ರೈಬ್ ಮಾಡಿ.

END OF STORY
ಮಲೆನಾಡು ಟುಡೆ ಫಾಲೋ ಮಾಡಿ

ತಾಜಾ ಸ್ಥಳೀಯ ಸುದ್ದಿಗಳಿಗಾಗಿ ನಮ್ಮ ಅಧಿಕೃತ ಚಾನೆಲ್‌ಗಳಿಗೆ ಸೇರಿ.

ಇತ್ತೀಚಿನ ವೀಡಿಯೊಗಳು
ajjimane ganesh

ಅಜ್ಜಮನೆ ಗಣೇಶ, ಪತ್ರಕರ್ತ, ಸಮಯ, ಟಿವಿ9, ನ್ಯೂಸ್​ ಫಸ್ಟ್​ನಲ್ಲಿ ವೃತ್ತಿ ನಿರ್ವಹಿಸಿರುವ ಅನುಭವವಿದೆ. ಗಳಿಸಿದ ಅನುಭವದ ಅನುಭಾವದ ಜೊತೆಗೆ ಮಲೆನಾಡು ಟುಡೆಯಲ್ಲಿ ಸೀನಿಯರ್​​ ಜರ್ನಲಿಸ್ಟ್​ ಆಗಿ ಕೆಲಸ ನಿರ್ವಹಿಸುತ್ತಿರುವೆ