SHIVAMOGGA CRIME NEWS TODAY

ಸ್ನೇಹಿತರೊಂದಿಗೆ ತುಂಗಾ ನದಿಗೆ ಈಜಲು ತೆರಳಿದ್ದ ಅಪ್ರಾಪ್ತ ನೀರಿನಲ್ಲಿ ಮುಳುಗಿ ಸಾವು

ajjimane ganesh ಅಥಾರಿಟಿ: ಮಲೆನಾಡು ಟುಡೆ ಡೆಸ್ಕ್

ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ / ಸ್ನೇಹಿತರೊಂದಿಗೆ ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಅಪ್ರಾಪ್ತ ಬಾಲಕನೋರ್ವ ಈಜು ಬಾರದೆ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ದಾರುಣ ಘಟನೆ ನಗರದಲ್ಲಿ ನಡೆದಿದೆ. ದೊಡ್ಡಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯ ಕುರುಬರ ಪಾಳ್ಯ ಸ್ಮಶಾನದ ಹಿಂಭಾಗದ ನದಿ ತೀರದಲ್ಲಿ ಈ ಅವಘಡ ಸಂಭವಿಸಿದೆ.

ತುಂಗಾ ನದಿಗೆ ಈಜಲು ತೆರಳಿದ್ದ ಅಪ್ರಾಪ್ತ

ಮೃತಪಟ್ಟ ಬಾಲಕ ತನ್ನ 4-5 ಜನ ಸ್ನೇಹಿತರ ಗುಂಪಿನೊಂದಿಗೆ ತುಂಗಾ ನದಿಗೆ ಈಜಲು ಹೋಗಿದ್ದ. ಈ ವೇಳೆ ಈಜು ಬಾರದ ಕಾರಣ, ಆತ ನೀರಿನಲ್ಲಿ ಮುಳುಗಿದ್ದಾನೆ. ಬಾಲಕ ನೀರಿನಲ್ಲಿ ಮುಳುಗುತ್ತಿರುವುದನ್ನು ಕಂಡು ಜೊತೆಯಲ್ಲಿದ್ದವರು ಗಾಬರಿಗೊಂಡಿದ್ದಾರೆ. ವಿಷಯ ತಿಳಿದ ತಕ್ಷಣ ಸ್ಥಳೀಯ ಮೀನುಗಾರರು ನದಿಗೆ ಇಳಿದು , ಯುವಕನನ್ನು ನೀರಿನಿಂದ ಮೇಲಕ್ಕೆತ್ತಿದ್ದಾರೆ. ಆದರೆ ಅಷ್ಟರಲ್ಲಿ ಆತ ಸಾವನ್ನಪ್ಪಿದ್ದ. ಸದ್ಯ ಈ ಸಂಬಂಧ ದೊಡ್ಡಪೇಟೆ ಪೊಲೀಸರು ವಿಚಾರಣೆ ನಡೆಸಿದ್ದಾರೆ.

ನಮ್ಮ ಮಲೆನಾಡು ಟುಡೆಯ ವಿಡಿಯೋಗಳನ್ನು ನೀವಿಲ್ಲಿ ನೋಡಬಹುದು: https://www.youtube.com/shorts/x8I63rpLvyw

Related News

🔔 Breaking News Alerts

ತಾಜಾ ಸುದ್ದಿಗಳನ್ನು ಮೊದಲು ಪಡೆಯಲು ನಮ್ಮ ನೋಟಿಫಿಕೇಶನ್ ಸೇವೆಯನ್ನು ಸಬ್‌ಸ್ಕ್ರೈಬ್ ಮಾಡಿ.

END OF STORY
ಮಲೆನಾಡು ಟುಡೆ ಫಾಲೋ ಮಾಡಿ

ತಾಜಾ ಸ್ಥಳೀಯ ಸುದ್ದಿಗಳಿಗಾಗಿ ನಮ್ಮ ಅಧಿಕೃತ ಚಾನೆಲ್‌ಗಳಿಗೆ ಸೇರಿ.

ಇತ್ತೀಚಿನ ವೀಡಿಯೊಗಳು
ಟ್ಯಾಗ್‌ಗಳು:
ajjimane ganesh

ಅಜ್ಜಮನೆ ಗಣೇಶ, ಪತ್ರಕರ್ತ, ಸಮಯ, ಟಿವಿ9, ನ್ಯೂಸ್​ ಫಸ್ಟ್​ನಲ್ಲಿ ವೃತ್ತಿ ನಿರ್ವಹಿಸಿರುವ ಅನುಭವವಿದೆ. ಗಳಿಸಿದ ಅನುಭವದ ಅನುಭಾವದ ಜೊತೆಗೆ ಮಲೆನಾಡು ಟುಡೆಯಲ್ಲಿ ಸೀನಿಯರ್​​ ಜರ್ನಲಿಸ್ಟ್​ ಆಗಿ ಕೆಲಸ ನಿರ್ವಹಿಸುತ್ತಿರುವೆ