17 ವರ್ಷದ ವಿದ್ಯಾರ್ಥಿ ಹೃದಯಾಘಾತಕ್ಕೆ ಬಲಿ 

131

SHIVAMOGGA | MALENADUTODAY NEWS | ಮಲೆನಾಡು ಟುಡೆ |‌ Jan 15, 2025

17 ವರ್ಷದ ವಿದ್ಯಾರ್ಥಿಯೊಬ್ಬ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಕಲಬುರಗಿಯ ಚಿತ್ತಾಪುರ ತಾಲೂಕಿನ ನಾಲವಾರ ಗ್ರಾಮದಲ್ಲಿ ನಡೆದಿದೆ.

ಕೊರೇಶ್‌ ಸಿದ್ದಣ್ಣ ಮೃತ ಪಟ್ಟಿರುವ ಯುವಕನಾಗಿದ್ದಾನೆ.  ಗ್ರಾಮದಲ್ಲಿ ಸ್ನೇಹಿತರ ಜೊತೆ ಕುಳಿತು ಮಾತನಾಡುತ್ತಿರುವಾಗ ಕೊರೇಶ್‌ಗೆ  ಎದೆನೋವು ಕಾಣಿಸಿಕೊಂಡಿದೆ. ಈ ಹಿನ್ನಲೆ ಕೂಡಲೇ ಆತನನ್ನು ನಾಲವಾರದ ಖಾಸಗಿ ಆಸ್ಪತ್ರೆಗೆ ದಾಖಲಿಸುವಷ್ಟರಲ್ಲಿ ಆತ ಸಾವನ್ನಪ್ಪಿರುವುದು ತಿಳಿದು ಬಂದಿದೆ. ಕೊರೇಶ್‌ ಕಲಬುರಗಿಯ ಖಾಸಗಿ ಕಾಲೇಜಿನಲ್ಲಿ ಪ್ಯಾರಾ ಮೆಡಿಕಲ್‌ ವ್ಯಾಸಂಗ ಮಾಡುತ್ತಿದ್ದ.

SUMMARY | A 17-year-old student died of a heart attack at Nalavara village in Chittapur taluk of Kalaburagi district on Sunday.

KEYWORDS |  Nalavara village,  student, heart attack, 

Share This Article