SHIVAMOGGA | MALENADUTODAY NEWS | ಮಲೆನಾಡು ಟುಡೆ Jan 11, 2025
ಅಪರೂಪದ ಘಟನೆಯೊಂದದಲ್ಲಿ ಶಿವಮೊಗ್ಗದ ಮಹಿಳೆಯೊಬ್ಬರ ಅಂಗಾಂಗಳನ್ನು ದಾನಮಾಡಲಾಗಿದೆ. ಶಿವಮೊಗ್ಗದ ರಾಗಿಗುಡ್ಡದ ನಿವಾಸಿ 41 ವರ್ಷದ ರೇಖಾರವರ ಮಿದುಳು ನಿಷ್ಕ್ರಿಯಗೊಂಡಿದ್ದರಿಂದ ಅವರ ಅಂಗಾಂಗ ದಾನವನ್ನು ವೆನ್ಲಾಕ್ ಆಸ್ಪತ್ರೆ ಯಶಸ್ವಿಯಾಗಿ ನಿರ್ವಹಿಸಿದೆ. ವಿಶೇಷ ಅಂದರೆ ವೆನ್ಲಾಕ್ ಆಸ್ಪತ್ರೆಯ 176 ವರ್ಷಗಳ ಇತಿಹಾಸದಲ್ಲಿ ಮೊದಲ ಬಾರಿಗೆ ಅಂಗಾಂಗ ದಾನ ಪ್ರಕ್ರಿಯೆ ನಡೆದಿದೆ.
ಏನಿದು ಘಟನೆ
ಶಿವಮೊಗ್ಗದ ರಾಗಿಗುಡ್ಡದ ರೇಖಾ ಪಿ. (41) ಎಂಬುವವರು ಕೆಲಸ ಮಾಡುತ್ತಿದ್ದ ಸಂದರ್ಭದಲ್ಲಿ ಮನೆಯಲ್ಲಿ ಅನಾರೋಗ್ಯಕ್ಕೀಡಾಗಿದ್ದರು. ಅವರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ನಡುವೆ ಹೆಚ್ಚಿನ ಚಿಕಿತ್ಸೆಗಾಗಿ ಕಳೆದ ಜನವರಿ ಆರರಂದು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಆ ಬಳಿಕ ಅವರಿಗೆ ಮಿದುಳಿನಲ್ಲಿ ರಕ್ತಸ್ರಾವ (ಸೆರೆಬ್ರೊ ವೆಸ್ಕ್ಯುಲರ್ ಆ್ಯಕ್ಸಿಡೆಂಟ್) ಆಗಿದೆ ಎಂಬುದು ಗೊತ್ತಾಗಿ, ಅವರ ಮೆದುಳು ನಿಷ್ಕ್ರೀಯಗೊಂಡಿರುವುದು ಖಚಿತವಾಗಿದೆ. ಈ ವೇಳೆ ಅಂಗಾಂಗ ದಾನದ ಬಗ್ಗೆ ಆಸ್ಪತ್ರೆಯ ವೈದ್ಯರು ಕುಟುಂಬಸ್ಥರಿಗೆ ತಿಳಿಸಿದ್ದಾರೆ. ತದನಂತರ, ಕುಟುಂಬಸ್ಥರು ಅಂಗಾಂಗ ದಾನಕ್ಕೆ ಒಪ್ಪಿದ್ದಾರೆ.
ಈ ನಿಟ್ಟಿನಲ್ಲಿ ಮಹಿಳೆಯ ಎರಡು ಕಣ್ಣುಗಳನ್ನು ಮಂಗಳೂರಿನ ಕೆಎಂಸಿ ಆಸ್ಪತ್ರೆಯ ಇಬ್ಬರು ರೋಗಿಗಳಿಗೆ ಹಾಗೂ ಲಿವರ್ ಅನ್ನು ಮೈಸೂರಿನ ಬಿಜಿಎಸ್ ಅಪೋಲೊ ಆಸ್ಪತ್ರೆಯ ರೋಗಿಯೊಬ್ಬರಿಗೆ ಕಸಿ ಮಾಡಲಾಗಿದೆ. ವಿಶೇಷ ಆಂಬುಲೆನ್ಸ್‌ನಲ್ಲಿ ಅಂಗಾಂಗಗಳನ್ನು ಸಾಗಿಸಲಾಗಿದೆ.


SUMMARY | brain dead womans organs donated at Wenlock hospital,
KEY WORDS | 176 year old Government Wenlock Hospital in Mangaluru, organ donation process, brain dead woman from Shivamogga ,