ಶಿವಮೊಗ್ಗ ; 23 ವರ್ಷದ ಯುವಕನಿಗೆ 20 ವರ್ಷ ಜೈಲು ಶಿಕ್ಷೆ ಲಕ್ಷಾಂತರ ರೂಪಾಯಿ ದಂಡ ವಿಧಿಸಿದ ಕೋರ್ಟ್​ ?

ಹಂಚಿಕೊಳ್ಳಿ
WhatsApp Facebook X Telegram
ಮಲೆನಾಡು ಟುಡೆ ಸಾಂದರ್ಭಿಕ ಚಿತ್ರ
ಮಲೆನಾಡು ಟುಡೆ ಸಾಂದರ್ಭಿಕ ಚಿತ್ರ

ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ: ಅಪ್ರಾಪ್ತ ವಯಸ್ಸಿನ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪಿಗೆ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಕಠಿಣ ಶಿಕ್ಷೆ ಹಾಗೂ ದಂಡವನ್ನು ವಿಧಿಸಿ ಆದೇಶ ಹೊರಡಿಸಿದೆ.

23 ವರ್ಷದ ಯುವಕನು 13 ವರ್ಷದ ಅಪ್ರಾಪ್ತ ವಯಸ್ಸಿನ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪದ ಮೇಲೆ ವಿನೋಬನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣವನ್ನು ಪಿಐ ಚಂದ್ರಕಲಾ ರವರು ತನಿಖೆ ನಡೆಸಿ ನ್ಯಾಯಾಲಯಕ್ಕೆ ಚಾರ್ಜ್‌ಶೀಟ್ ಸಲ್ಲಿಸಿದ್ದರು.

ವಾದ-ಪ್ರತಿವಾದಗಳನ್ನು ಆಲಿಸಿದ ನ್ಯಾಯಾಧೀಶರಾದ ನಿಂಗನಗೌಡ ಬಿ. ಪಾಟೀಲ್ ರವರು, ಆರೋಪಿಗೆ 20 ವರ್ಷ ಕಠಿಣ ಕಾರಾಗೃಹವಾಸ ಮತ್ತು 1,01,000 ರೂ. ದಂಡ ಹಾಗೂ ನೊಂದ ಬಾಲಕಿಗೆ 4,00,000 ರೂ. ಪರಿಹಾರವನ್ನು ನೀಡಲು ಆದೇಶಿಸಿರುತ್ತಾರೆ.

ವಿಷಯಗಳು:
ಹಂಚಿಕೊಳ್ಳಿ
WhatsApp Facebook X Telegram
Prathapa thirthahalli
ಲೇಖಕರ ಬಗ್ಗೆ

Prathapa thirthahalli

Malenadu Today Contributor