SHIVAMOGGA | MALENADUTODAY NEWS
Sep 6, 2024
2024 ganesh chaturthi | ನಾಳೆ ಗಣೇಶೋತ್ಸವ 2024 ರ ಸಂಭ್ರಮ. ಈ ಹಿನ್ನೆಲೆಯಲ್ಲಿ ನಾಡಿನೆಲ್ಲೆಡೆ ಗಣೇಶ ಚತುರ್ಥಿಗೆ ಈಗಾಗಲೇ ಸಿದ್ಧತೆಗಳನ್ನ ಮಾಡಿಕೊಂಡಿದ್ದಾರೆ. ಹಬ್ಬದ ಆಚರಣೆಯ ನಡುವೆ ಸರ್ಕಾರ ಕೆಲವೊಂದು ಮಾರ್ಗಸೂಚಿಗಳನ್ನ ನೀಡಿದೆ. ಅದರಲ್ಲಿಯು ವಿಶೇಷವಾಗಿ ಪೆಂಡಾಲ್ಗಳಲ್ಲಿ ಪ್ರಸಾದವಾಗಿ ವಿತರಿಸಲಾಗುವ ಆಹಾರ ಪದಾರ್ಥಗಳ ಶುಚಿತ್ವ, ಗುಣಮಟ್ಟ ಮತ್ತು ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು FSSAI ಪರವಾನಗಿ ಪಡೆದಿರುವ ವ್ಯಕ್ತಿ ಅಥವಾ ಸಂಸ್ಥೆಗಳು ಮಾತ್ರವೇ ಪ್ರಸಾದ ಸಿದ್ದಪಡಿಸಲು ಅವಕಾಶ ನೀಡುವಂತೆ ತಿಳಿಸಿದೆ.
ganesh chaturthi in 2024 rules ಗಣೇಶ ಚರ್ತುರ್ಥಿ ನಿಯಮ
ಈ ಸಂಬಂಧ ಸರ್ಕಾರದ ಆಹಾರ ಸುರಕ್ಷತೆ ಹಾಗೂ ಗುಣಮಟ್ಟ ಇಲಾಖೆ ಬೆಂಗಳೂರು ಹಾಗೂ ಬೆಂಗಳೂರು ಹೊರತುಪಡಿಸಿ ಉಳಿದೆಡೆಗೆ, ಹೀಗೇ ಎರಡು ಆದೇಶಗಳನ್ನ ಹೊರಡಿಸಿದೆ. ಗೌರಿ ಗಣೇಶ ಹಬ್ಬವಿರುವುದರಿಂದ ಗಣೇಶ ಮೂರ್ತಿಗಳ ಪ್ರತಿಷ್ಠಾಪನೆ ಮಾಡಿದ ಸ್ಥಳಗಳಲ್ಲಿ ಹೆಚ್ಚಿನ ಸಂಖ್ಯೆಯ ಭಕ್ತಾದಿಗಳು ಪಾಲ್ಗೊಂಡು ಪ್ರಸಾದ ರೂಪದಲ್ಲಿ ವಿತರಿಸಲಾಗುವ ಆಹಾರ ಪದಾರ್ಥಗಳನ್ನು ಸೇವಿಸುತ್ತಾರೆ.
ganesh visarjan shimoga 2024
ಈ ಹಿನ್ನೆಲೆಯಲ್ಲಿ ಪ್ರಸಾದದ ನೈರ್ಮಲ್ಯತೆ, ಗುಣಮಟ್ಟ ಮತ್ತು ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳುವ ದೃಷ್ಟಿಯಿಂದ ಗಣೇಶ ಮೂರ್ತಿಗಳ ಪ್ರತಿಷ್ಠಾವನೆಗಾಗಿ ಸ್ಥಳೀಯ ಸಂಸ್ಥೆಗಳಿಂದ ಅನುಮತಿ ನೀಡುವ ಸಂದರ್ಭದಲ್ಲಿ FSSAI ನೋಂದಣಿ/ಪರವಾನಗಿ ಪಡೆದಿರುವ ವ್ಯಕ್ತಿ/ಸಂಸ್ಥೆಗಳಿಂದ ಮಾತ್ರ ಅಲ್ಲಿ ವಿನಿಯೋಗವಾಗುವ ಪ್ರಸಾದವನ್ನು ಸಿದ್ಧಪಡಿಸಲಾಗುತ್ತಿದೆಯೇ ಎಂಬುದನ್ನು ಖಚಿತಪಡಿಸಿಕೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಅಗತ್ಯ ನಿರ್ದೇಶನಗಳನ್ನು ನೀಡುವಂತೆ ಕೋರಿದೆ ಎಂದು ತನ್ನ ಆದೇಶದಲ್ಲಿ ತಿಳಿಸಿದೆ.

ನಿಮ್ಮ ವಾಟ್ಸಾಪ್ನಲ್ಲಿ ನೋಡಿ, ಜಸ್ಟ್ ಒಂದು ಫಾಲೋ ಕೊಡಿ