ಸುದ್ದಿಯ ಸ್ಥಳ: Bhadravati, Shivamogga, Karnataka
ಮಲೆನಾಡು ಟುಡೆ ಸುದ್ದಿ/ ಶಿವಮೊಗ್ಗ : ಶಿಕಾರಿಪುರದಿಂದ ಭದ್ರಾವತಿ ಕಡೆಗೆ ಹೋಗಲು ಶಿವಮೊಗ್ಗ ಬಸ್ ನಿಲ್ದಾಣಕ್ಕೆ ಬಂದಿಳಿದ ರಕ್ಷಿತಾ ಎಂಬ 22 ವರ್ಷದ ಮಹಿಳೆ ನ.12 ರಂದು ಕಾಣೆಯಾಗಿದ್ದು, ಪತ್ತೆಗಾಗಿ ಪೊಲೀಸರು ಪತ್ರಿಕಾ ಪ್ರಕಟಣೆ ಹೊರಡಿಸಿದ್ದಾರೆ.
ಕಾಣೆಯಾದ ಮಹಿಳೆ 4.9 ಅಡಿ ಎತ್ತರ, ಎಣ್ಣೆಕಪ್ಪು, ಮೈಬಣ್ಣ, ಸಾಧಾರಣ ಮೈಕಟ್ಟು, ಕೋಲುಮುಖ ಹೊಂದಿದ್ದು, ಕನ್ನಡ ಮತ್ತು ಹಿಂದಿ ಭಾಷೆ ಮಾತನಾಡುತ್ತಾರೆ. ಕಾಣೆಯಾದ ವೇಳೆ ಹಳದಿ ಬಣ್ಣದ ಚೂಡಿದಾರ ಧರಿಸಿರುತ್ತಾರೆ.
ಈ ಮಹಿಳೆ ಬಗ್ಗೆ ಸುಳಿವು ಇದ್ದಲ್ಲಿ ದೊಡ್ಡಪೇಟೆ ಪೊಲೀಸ್ ಠಾಣೆ ದೂ.ಸಂ.: 08182-261414, 9480803345, 8495037735 ಗಳನ್ನು ಸಂಪರ್ಕಿಸಿ ಮಾಹಿತಿ ನೀಡುವಂತೆ ಪೊಲೀಸ್ ಪ್ರಕಟಣೆ ತಿಳಿಸಿದೆ.
