ಶಿವಮೊಗ್ಗದಲ್ಲಿ ಸಿಎ ವ್ಯಾಸಂಗ ಮಾಡುತ್ತಿದ್ದ 24 ವರ್ಷದ ಯುವಕ ಸಾವು

ಹಂಚಿಕೊಳ್ಳಿ
WhatsApp Facebook X Telegram
ಸಿಎ ವ್ಯಾಸಂಗ ಮಾಡುತ್ತಿದ್ದ 24 ವರ್ಷದ ಯುವಕ ಶಿವಮೊಗ್ಗದ ಬಾಡಿಗೆ ಮನೆಯಲ್ಲಿ ಮೃತ ಸ್ಥಿತಿಯಲ್ಲಿ ಪತ್ತೆ

ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ / ಸಿಎ ವ್ಯಾಸಂಗ ಹಾಗೂ ತರಬೇತಿ ಪಡೆಯುತ್ತಿದ್ದ 24 ವರ್ಷದ ಯುವಕನೊಬ್ಬ ಶಿವಮೊಗ್ಗ ನಗರದ ಬೊಮ್ಮನಕಟ್ಟೆ ಕಲ್ಪವೃಕ್ಷ ಲೇಔಟ್‌ನ ಬಾಡಿಗೆ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ.

ಮೃತ ಯುವಕನನ್ನು ಶ್ರೀನಿಧಿ (24) ಎಂದು ಗುರುತಿಸಲಾಗಿದೆ. ಶ್ರೀನಿಧಿ ಕಳೆದ ಸುಮಾರು ಒಂದು ವರ್ಷದಿಂದ ಪ್ರತಿಷ್ಠಿತ ಚಾರ್ಟರ್ಡ್ ಅಕೌಂಟೆಂಟ್ ಒಬ್ಬರ ಬಳಿ ಸಿಎ ವ್ಯಾಸಂಗದ ಜೊತೆಗೆ ತರಬೇತಿಯನ್ನೂ ಪಡೆಯುತ್ತಿದ್ದ ಎನ್ನಲಾಗಿದೆ. ಎಂದಿನಂತೆ ಕೆಲಸ ಮುಗಿಸಿಕೊಂಡು ಮನೆಗೆ ತೆರಳಿದ್ದ ಶ್ರೀನಿಧಿ ಬಳಿಕ ಬಾಡಿಗೆ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ. ಆತ್ಮಹತ್ಯೆಗೆ ನಿಖರ ಕಾರಣ ಏನು ಎಂಬುದು ಸದ್ಯಕ್ಕೆ ತಿಳಿದುಬಂದಿಲ್ಲ.

ಘಟನೆಯ ಕುರಿತು ಮಾಹಿತಿ ತಿಳಿಯುತ್ತಿದ್ದಂತೆ ವಿನೋಬನಗರ ಪೊಲೀಸ್ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮಹಜರ್ ಮುಗಿಸಿದ್ದಾರೆ. ಬಳಿಕ ಮೃತದೇಹವನ್ನು ಮೆಗ್ಗಾನ್ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದೆ. ಘಟನೆ ಸಂಬಂಧ ವಿನೋಬನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ವಿಷಯಗಳು:
ಹಂಚಿಕೊಳ್ಳಿ
WhatsApp Facebook X Telegram
ajjimane ganesh
ಲೇಖಕರ ಬಗ್ಗೆ

ajjimane ganesh

Malenadu Today Contributor