Shivamogga | Feb 2, 2024 | 15 ವರ್ಷದ ಬಾಲಕಿ ಲೈಂಗಿಕ ಕಿರುಕುಳ ನೀಡಿದ ಆರೋಪ ಸಂಬಂಧ 25 ವರ್ಷದ ಯುವಕನಿಗೆ ಶಿವಮೊಗ್ಗ ಕೋರ್ಟ್ 20 ವರ್ಷ ಶಿಕ್ಷೆ ವಿಧಿಸಿದೆ.
2022ನೇ ಸಾಲಿನಲ್ಲಿ ಹೊಸನಗರ ತಾಲ್ಲೂಕಿನ ವಾಸಿ 25 ವರ್ಷದ ಯುವಕನು 15 ವರ್ಷದ ಅಪ್ರಾಪ್ತ ವಯ್ಯಸ್ಸಿನ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದ. ಈ ಸಂಬಂಧನೊಂದ ಬಾಲಕಿಯು ದೂರು ನೀಡಿದ್ದಳು ಪ್ರಕರಣದಲ್ಲಿ ಆಗಿನ ತನಿಖಾಧಿಕಾರಿಗಳಾದ ಗಿರೀಶ್ ಬಿ.ಸಿ, ಪೊಲೀಸ್ ವೃತ್ತ ನಿರೀಕ್ಷಕರು, ಹೊಸನಗರ ವೃತ್ತ ಚಾರ್ಜ್ಶೀಟ್ ಸಲ್ಲಿಸಿದ್ದರು.
ಶಿವಮೊಗ್ಗದ FTSC-1 ನ್ಯಾಯಾಲಯ
ಪ್ರಕರಣದಲ್ಲಿ ಶಿವಮೊಗ್ಗದ FTSC-1 ನ್ಯಾಯಲಯದಲ್ಲಿ ಸರ್ಕಾರದ ಪರವಾಗಿ ಹರಿಪ್ರಸಾದ್, ಸರ್ಕಾರಿ ಅಭಿಯೋಜಕರವರು ವಾದ ಮಂಡಿಸಿದ್ದರು. ಇದೀಗ, ಶಿವಮೊಗ್ಗದ FTSC-1 ನ್ಯಾಯಲಯದಲ್ಲಿ ಪ್ರಕರಣದ ವಿಚಾರಣೆ ಮುಗಿಸಿ ತೀರ್ಪು ನೀಡಿದೆ. ಇನ್ನೂ ಆರೋಪ ದೃಡಪಟ್ಟ ಹಿನ್ನೆಲೆಯಲ್ಲಿ, ಮಾನ್ಯ ನ್ಯಾಯಾಧಿಶರಾದ ಲತಾ ರವರು ದಿನಾಂಕಃ 31-01-2024 ರಂದು ಆರೋಪಿಗೆ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ 20 years in prison ಮತ್ತು 50,000/- ರೂ ದಂಡ, ದಂಡ ಕಟ್ಟಲು ವಿಫಲನಾದಲ್ಲಿ ಹೆಚ್ಚುವರಿ 4 ತಿಂಗಳು ಸಾಧಾ ಕಾರಾವಾಸ ಶಿಕ್ಷೆ ವಿಧಿಸಿ ಆದೇಶಿಸಿದ್ದಾರೆ ಎಂದು ಪೊಲೀಸ್ ಪ್ರಕಟಣೆಯಲ್ಲಿ ತಿಳಿಸಲಾಗಿದೆ.