21 ವರ್ಷದ ಯುವಕನಿಗೆ 30 ವರ್ಷ ಕಠಿಣ ಕಾರಾಗೃಹ ಶಿಕ್ಷೆ, ಕಾರಣವೇನು

prathapa thirthahalli
Prathapa thirthahalli - content producer

ಶಿವಮೊಗ್ಗ: ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ, 21 ವರ್ಷದ ಆರೋಪಿಗೆ ಶಿವಮೊಗ್ಗದ ಜಿಲ್ಲಾ ಹಾಗೂ ಸತ್ರ ನ್ಯಾಯಾಲಯವು ಆರೋಪಿಗೆ ಬರೋಬ್ಬರಿ 30 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಮತ್ತು ₹1.85 ಲಕ್ಷ ರೂಪಾಯಿ ದಂಡವನ್ನು ವಿಧಿಸಿ ಆದೇಶಿಸಿದೆ.

ಶಿವಮೊಗ್ಗ-ಬೆಂಗಳೂರು ಪ್ರಯಾಣಿಕರೇ ಗಮನಿಸಿ: 3 ರೈಲುಗಳು ರದ್ದು, 4 ಮಾರ್ಗ ಬದಲಾವಣೆ! ಪೂರ್ತಿ ವಿವರ ಓದಿ

30 Yrs Jail for Minor Assault ಪ್ರಕರಣದ ಹಿನ್ನೆಲೆ

2023 ರಲ್ಲಿ ಈ ಘಟನೆ ಸಂಭವಿಸಿತ್ತು. ಯುವಕನೊಬ್ಬ ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಆರೋಪಿಸಿ, ಭದ್ರಾವತಿ ನ್ಯೂ ಟೌನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿತ್ತು. ಪ್ರಕರಣದ ತನಿಖೆಯನ್ನು ಭದ್ರಾವತಿ ನಗರ ವೃತ್ತದ ಸಿಪಿಐ ಶ್ರೀಶೈಲ ಕುಮಾರ ಜೆ. ಅವರು ನಡೆಸಿ, ನ್ಯಾಯಾಲಯಕ್ಕೆ ದೋಷಾರೋಪಣಾ ಪತ್ರವನ್ನು ಸಲ್ಲಿಸಿದ್ದರು.

ಹೆಚ್ಚುವರಿ ಜಿಲ್ಲಾ ಹಾಗೂ ಸತ್ರ ನ್ಯಾಯಾಲಯ FTSC-1, ಶಿವಮೊಗ್ಗ ನ್ಯಾಯಾಲಯದ ಮಾನ್ಯ ನ್ಯಾಯಾಧೀಶರಾದ ನಿಂಗನಗೌಡ ಪಾಟೀಲ್ ಅವರ ಸಮ್ಮುಖದಲ್ಲಿ ಈ ಪ್ರಕರಣದ ವಿಚಾರಣೆ ನಡೆಯಿತು. ಸರ್ಕಾರದ ಪರವಾಗಿ ಹಿರಿಯ ಸರ್ಕಾರಿ ಅಭಿಯೋಜಕರಾದ ಶ್ರೀ ಶ್ರೀಧರ್ ಅವರು ವಾದ ಮಂಡಿಸಿದರು. ನ್ಯಾಯಾಲಯದಲ್ಲಿ ಲೈಂಗಿಕ ದೌರ್ಜನ್ಯದ ಆರೋಪವು ಯುವಕನ ವಿರುದ್ಧ ಧೃಡಪಟ್ಟ ಹಿನ್ನೆಲೆಯಲ್ಲಿ, ನ್ಯಾಯಾಧೀಶರು ಆರೋಪಿಗೆ 30 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಮತ್ತು ₹1,85,000/- ದಂಡ ವಿಧಿಸಿ ಮಹತ್ವದ ಆದೇಶ ನೀಡಿದ್ದಾರೆ. 

30 Yrs Jail for Minor Assault Shivamogga

Share This Article