ಆಸ್ತಿ ತೆರಿಗೆ ಮೇಲೆ 5% ರಿಯಾಯಿತಿ/ ಏ9 ಕ್ಕೆ ಕರೆಂಟ್ ಇರಲ್ಲ/ ನವೋದಯ ಶಾಲೆ ಪರೀಕ್ಷೆ ಮತ್ತು ಇನ್ನಷ್ಟು ಸುದ್ದಿ TODAY 5 NEWS

5% discount on property tax/ No current for A9/ Navodaya School Exam and more news TODAY 5 NEWS

ಆಸ್ತಿ ತೆರಿಗೆ ಮೇಲೆ 5% ರಿಯಾಯಿತಿ/ ಏ9 ಕ್ಕೆ ಕರೆಂಟ್ ಇರಲ್ಲ/ ನವೋದಯ ಶಾಲೆ ಪರೀಕ್ಷೆ ಮತ್ತು ಇನ್ನಷ್ಟು ಸುದ್ದಿ TODAY 5 NEWS

  ತೆರಿಗೆಯ ಮೇಲೆ ಶೇ.5% ರಷ್ಟು ವಿನಾಯಿತಿ

2023- 24 ನೇ ಸಾಲಿನ ಆಸ್ತಿ ತೆರಿಗೆಯನ್ನು  ಏ.01 ರಿಂದ 30 ರೊಳಗಾಗಿ ಪಾವತಿಸಿದಲ್ಲಿ ಆಸ್ತಿ ತೆರಿಗೆಯ ಮೇಲೆ ಶೇ.5% ರಷ್ಟು ವಿನಾಯಿತಿಯನ್ನು ಕಲ್ಪಿಸಲಾಗಿದೆ. ಆದ್ದರಿಂದ ಆಸ್ತಿ ಮಾಲೀಕರು ಶೇ.5% ರ ವಿನಾಯಿತಿಯ ಪ್ರಯೋಜನ ಪಡೆದುಕೊಳ್ಳಬಹುದೆಂದು ಶಿರಾಳಕೊಪ್ಪದ ಪುರಸಭೆ ಮುಖ್ಯಾಧಿಕಾರಿಗಳು ತಿಳಿಸಿದ್ದಾರೆ.

ತೆರಿಗೆಯನ್ನು ಏ.01 ರಿಂದ 30 ರವರೆಗೆ ಶೇ. 5% ರಿಯಾಯಿತಿಯಲ್ಲಿ, ಮೇ.01 ರಿಂದ ಜೂ.30 ರವರೆಗೆ ದಂಡ ರಹಿತವಾಗಿ ಹಾಗೂ ಜು.01 ರಿಂದ ಮಾಸಿಕ ಶೇ.2% ರಂತೆ ದಂಡ ವಿಧಿಸಿ ಪಾವತಿ ಮಾಡಲಾಗುವುದು.

 ವಿಶೇಷ ಸೂಚನೆ : ಕಟ್ಟಡ / ಖಾಲಿ ನಿವೇಶನ ಛಾಯಾಚಿತ್ರ, ಮಾಲೀಕರ ಭಾವಚಿತ್ರ ಮಾಲೀಕತ್ವದ ದಾಖಲೆ, ಚುನಾವಣಾ ಗುರುತಿನ ಚೀಟಿ, ಇತ್ತೀಚಿನ ವಿದ್ಯುತ್ ಬಿಲ್ ಪ್ರತಿಯನ್ನು ತೆರಿಗೆ  ವಿವರ ಪಟ್ಟಿಯೊಂದಿಗೆ ಸಲ್ಲಿಸಿ ನಿಮ್ಮ ಆಸ್ತಿಯ ಆನ್ ಲೈನ್ ದಾಖಲಾತಿಗೆ ಸಹಕರಿಸುವಂತೆ ಕೋರಿದ್ದಾರೆ.

ನವೋದಯ ಶಾಲೆ ಪ್ರವೇಶ ಪರೀಕ್ಷೆ

 ಗಾಜನೂರಿನ ಜವಾಹರ್ ನವೋದಯ ವಿದ್ಯಾಲಯದ 6ನೇ ತರಗತಿಗೆ ಪ್ರವೇಶ ಪಡೆಯಲು ಪ್ರವೇಶ ಪರೀಕ್ಷೆಯನ್ನು ಏ.29 ರ ಶನಿವಾರದಂದು ನಡೆಸಲಾಗುವುದು. 

ಈಗಾಗಲೇ ಅರ್ಜಿ ಸಲ್ಲಿಸಿರುವ ವಿದ್ಯಾರ್ಥಿಗಳು www.navodaya.gov.in ಅಥವಾ https://cbseitms.rcil.gov.in/nvs/AdminCard/AdminCard  ವೆಬ್‍ಸೈಟ್‍ನಿಂದ ಪ್ರವೇಶ ಪತ್ರಗಳನ್ನು ಪಡೆದುಕೊಂಡು ಪರೀಕ್ಷೆಗೆ ಹಾಜರಾಗಬೇಕೆಂದು ಶಿವಮೊಗ್ಗ ಜಿಲ್ಲೆಯ ಗಾಜನೂರು ಜವಾಹರ್ ನವೋದಯ ವಿದ್ಯಾಲಯದ ಪ್ರಾಚಾರ್ಯರಾದ ಜಿ.ವಲ್ಲಿಯಮೈ ತಿಳಿಸಿದ್ದಾರೆ.

ಅರ್ಹ ಮತದಾರರೆಲ್ಲ ಮತದಾನ ಮಾಡುವಂತೆ ಡಿಸಿ ಮನವಿ

ಮೇ 10 ರಂದು ನಡೆಯುವ ವಿಧಾನಸಭಾ ಚುನಾವಣೆಯಲ್ಲಿ ಪ್ರತಿ ವಿಕಲಚೇತನರು ತಮ್ಮ ತಮ್ಮ ಬೂತ್‍ಗಳಿಗೆ ತೆರಳಿ ಕಡ್ಡಾಯವಾಗಿ ಮತದಾನ ಮಾಡಬೇಕೆಂದು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಆರ್ ಮತದಾನ ಜಾಗೃತಿ ಕಾರ್ಯಕ್ರಮದಲ್ಲಿ ಪ್ರೇರೇಪಿಸಿದರು.

ಎಲ್ಲ ಅರ್ಹ ಮತದಾರರು ಮತದಾನದಲ್ಲಿ ಪಾಲ್ಗೊಳ್ಳುವ ಕುರಿತು ಜಾಗೃತಿ ಮೂಡಿಸಲು ಮಹಾನಗರಪಾಲಿಕೆಯಿಂದ ಪ್ರಮುಖ ರಸ್ತೆಗಳಲ್ಲಿ ಆಯೋಜಿಸಲಾಗಿದ್ದ ಮತದಾನ ಜಾಗೃತಿ ಕಾರ್ಯಕ್ರಮದಲ್ಲಿ ಅವರು ಪಾಲ್ಗೊಂಡು ಮಾತನಾಡಿದರು.

 ಮಿಳಘಟ್ಟದಲ್ಲಿ ವಿಕಲಚೇತನರು ನಿರ್ವಹಿಸುವ ಒಂದು ಮತಗಟ್ಟೆಯನ್ನು ಸ್ಥಾಪಿಸಲಾಗಿದೆ. 23 ಜನ ವಿಕಲಚೇತನರು ಇಲ್ಲಿ ನಿರ್ವಹಣೆ ಮಾಡುವರು ಎಂದು ತಿಳಿಸಿದ ಅವರು ಎಲ್ಲ ಅರ್ಹ ಮತದಾರರು ತಮ್ಮ ತಮ್ಮ ಮತಗಟ್ಟೆಗಳಿಗೆ ತೆರಳಿ ಕಡ್ಡಾಯವಾಗಿ ಮತದಾನ ಮಾಡಬೇಕೆಂದು ಸಾರ್ವಜನಿಕರಲ್ಲಿ ಮನವಿ ಮಾಡಿದರು.

 ವಿಕಲಚೇತನರು ತಮ್ಮ ತ್ರಿಚಕ್ರ ವಾಹನಗಳಲ್ಲಿ ಇಂದು ಬೆಳಿಗ್ಗೆ  ಮಹಾನಗರಪಾಲಿಕೆ ಆವರಣದಿಂದ ನಗರದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ಮತದಾನ ಜಾಗೃತಿ ಮೂಡಿಸುವ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸ್ನೇಹಲ್ ಸುಧಾಕರ್ ಲೋಖಂಡೆ, ಅಂಗವಿಕಲರ ಕಲ್ಯಾಣಾಧಿಕಾರಿ ಶಿಲ್ಪಾ ದೊಡ್ಮನಿ, ಸ್ವೀಪ್ ಅಧಿಕಾರಿ ನವೀದ್ ಹಾಗೂ ಸಹಸ್ರಾರು ಸಂಖ್ಯೆಯ ವಿಕಲಚೇತನರು ಭಾಗವಹಿಸಿದ್ದರು.

ತರಬೇತಿ ಶಿಬಿರ

ಮೃಗಾಲಯದ ಆವರಣದಲ್ಲಿ “ನೀವು ಕೂಡ ಪ್ರಾಣಿಪಾಲಕರಾಗಿ”  ಎಂಬ ವಿಷಯದ ಬಗ್ಗೆ ತಂಡದಲ್ಲಿ 25 ಜನರಿಗೆ ಮಿತಿಗೊಳಿಸಿ ಬೇಸಿಗೆ ಶಿಬಿರವನ್ನು ಏ.13 ರಿಂದ 15 ರವರೆಗೆ ಆಯೋಜಿಸಲಾಗಿದೆ.

 ಮೃಗಾಲಯ ಬೇಸಿಗೆ ಶಿಬಿರದಲ್ಲಿ ಪಾಲ್ಗೊಳ್ಳ ಬಯಸುವ ಆಸಕ್ತರು ಈ ಬಗ್ಗೆ ಪೂರ್ಣ ವಿವರಗಳನ್ನು ಕಚೇರಿಯಲ್ಲಿ ಪಡೆಯಬಹುದು. ಹೆಚ್ಚಿನ ವಿವರಗಳಿಗೆ ಮೊ.ಸಂಖ್ಯೆ: 8073322471 ಗೆ ಸಂಪರ್ಕಿಸಬಹುದೆಂದು ಕಾರ್ಯ ನಿರ್ವಾಹಕ ನಿರ್ದೇಶಕರು, ಹುಲಿ-ಸಿಂಹಧಾಮ ತ್ಯಾವರೆಕೊಪ್ಪ, ಶಿವಮೊಗ್ಗ ಇವರು ತಿಳಿಸಿದ್ದಾರೆ.

*ವಿದ್ಯುತ್ ವ್ಯತ್ಯಯ

ನಗರದಲ್ಲಿ ಪರಿವರ್ತಕ ಅಳವಡಿಸುವ ಕಾಮಗಾರಿ ಇರುವ ಕಾರಣ ಫೀಡರ್-3 11 ಕೆ.ವಿ  ಮಾರ್ಗ ಮುಕ್ತತೆ ನೀಡುವುದರಿಂದ  ಏ.09 ರಂದು ಬೆಳಗ್ಗೆ 10 ರಿಂದ ಮಧ್ಯಾಹ್ನ 02 ಗಂಟೆಯವರೆಗೆ ವಿದ್ಯಾನಗರ, ಚಿಕ್ಕಲ್, ಗುರುಪುರ, ಪುರಲೆ, ಸಿದ್ದೇಶ್ವರ ನಗರ, ವೆಂಕಟೇಶ್ವರ ನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

Read /ಶಿವಮೊಗ್ಗದ ಈ ಕ್ಷೇತ್ರದ  ಟಿಕೆಟ್ ವಿಚಾರಕ್ಕೆ ಪ್ರಧಾನಿ ನರೇಂದ್ರ ಮೋದಿಗೆ ಪತ್ರ! ವೈರಲ್​ ಲೆಟರ್​ನಲ್ಲಿ ಏನಿದೆ ಗೊತ್ತಾ 

Read /ಗೇರು ಬೀಜ ಕಿತ್ತಿದ್ದೇಕೆ ಎಂದಿದ್ದಕ್ಕೆ ವೃದ್ಧೆ ಮೇಲೆ ಹಲ್ಲೆ !

Read / ಮತ್ತೆ ಶುರುವಾಯ್ತು ನಕಲಿ ಲೋಕಾಯುಕ್ತರ ಹಾವಳಿ/ ಅಧಿಕಾರಿಗೆ ಕರೆ ಮಾಡಿ  1  ಲಕ್ಷ ಗೂಗಲ್ ಪೇ ಮಾಡುವಂತೆ ಬೆದರಿಕೆ 

Read / ಶಿಕಾರಿಪುರ ಹುಚ್ಚರಾಯಸ್ವಾಮಿ ದೇವರ ರಥೋತ್ಸವಕ್ಕೂ ನೀತಿ ಸಂಹಿತೆ ಎಫೆಕ್ಟ್​ 

Read / ತಗ್ಗಿನಲ್ಲಿದ್ದ ಮನೆಯ ಮೇಲೆ ಉರುಳಿ ಬಿದ್ದ ಟ್ರ್ಯಾಕ್ಟರ್​! 

Read / Bhadravati/  ಪರ್ಮಿಶನ್​ ಇಲ್ಲದೇ ಪ್ರಚಾರ/ ಭದ್ರಾವತಿಯಲ್ಲಿ ಬಿ.ಕೆ. ಸಂಗಮೇಶ್ವರ್​ಗೆ ಸೇರಿದ ವಾಹನ ಜಪ್ತಿ 

Read / ತೀರ್ಥಹಳ್ಳಿಯಲ್ಲಿ  ಗೃಹಸಚಿವರಿಗೂ ತಟ್ಟಿದ ನೀತಿ ಸಂಹಿತೆಯ ಬಿಸಿ 

Read / ಆಯನೂರು ಮಂಜುನಾಥ್ ಕಾಂಗ್ರೆಸ್​ ಯಾತ್ರೆಗೆ ಸಿಕ್ಕಿತು ನೋ ಅಬ್ಜೆಕ್ಷನ್​! 

Read/ ಸಾಗರಕ್ಕೆ ಬರುತ್ತಿದ್ದ ಬಸ್​ ಅಪಘಾತ/ ಸ್ಟೇರಿಂಗ್​  ಕಟ್ ಆಗಿ ಹೊಂಡಕ್ಕೆ ಉರುಳಿದ ಸರ್ಕಾರಿ ಸಾರಿಗೆ 




ನಮ್ಮ ವಾಟ್ಸ್ಯಾಪ್ ಗ್ರೂಪ್ ಲಿಂಕ್ ಇದು  ಕ್ಲಿಕ್ ಮಾಡಿ

 

Facebook ನಲ್ಲಿ ನಮ್ಮ ಪೇಜ್​ ನೋಡಿ : Malenadutoday.com

 

Twitter ನಲ್ಲಿ ನಾವಿದ್ದೇವೆ, ಫಾಲೋ ಮಾಡಿ : Malenadutoday.com

 

Instagram ನಲ್ಲಿ ಕ್ಲಿಕ್​ ಮಾಡಿ : Malenadutoday.com

 

Telegram ನಲ್ಲಿ ಸುದ್ದಿ ಪಡೆಯಲು ಲಿಂಕ್ ಒತ್ತಿ : Malenadutoday.com 



 

MALENADUTODAY.COM/ SHIVAMOGGA / KARNATAKA WEB NEWS

HASTAGS/ Shivamogga today, shivamogga news, shivamogga live, justshviamogga, firstnewsshivamogga, shivamoggavarte , shivamogga times news, shivamogga pepar news daily , shivamogga report , shivamogga police news, shivamogga malnad news, shivamogga today report, shivamogga  accident , shivamogga place , shivamogga-shimoga , shivamogga latest news,shivamogga airport,shivamogga dc office,shivamogga today news,shivamogga live,shivamogga elections,shivamogga news today, bhadravati,bhadravati city,bhadravati town,bhadravati karnataka  Sagar Rural Police Station, #Shivamogga #ShivamoggaNews #Shimoga #MalnadNews #LocalNews #KannadaNewsWebsite Shimoga Top News, Today News, No Electricity, Power Cut, Rebate in Property Tax, Shiralakoppa, Navodaya School, Application Invited, Shivamogga District Administration, Shimoga Report, ಶಿವಮೊಗ್ಗ ಟಾಪ್ ನ್ಯೂಸ್, ಟುಡೇ ನ್ಯೂಸ್, ವಿದ್ಯುತ್ ಇರೋದಿಲ್ಲ, ಪವರ್ ಕಟ್, ಆಸ್ತಿ ತೆರಿಗೆಯಲ್ಲಿ ರಿಯಾಯಿತಿ, ಶಿರಾಳಕೊಪ್ಪ, ನವೋದಯ ಶಾಲೆ, ಅರ್ಜಿ ಆಹ್ವಾನ, ಶಿವಮೊಗ್ಗ ಜಿಲ್ಲಾಡಳಿತ, ಶಿವಮೊಗ್ಗ ವರದಿ ,