ಒಂದು ತಿಂಗಳು ಪೂರ್ತಿ 50% ಆಫರ್​ನಲ್ಲಿ ಸಿಗಲಿವೆ ಪುಸ್ತಕಗಳು, ಕಾರಣವೇನು

ಹಂಚಿಕೊಳ್ಳಿ
WhatsApp Facebook X Telegram
Cyber Scam PM Modi AI Deepfake Anandapura Crash 50% Discount KEA Clarifies Shivamogga Court Verdict Hosanagara Police Thirthahalli Police Reservoir Water Shivamogga
Cyber Scam PM Modi AI Deepfake Anandapura Crash 50% Discount KEA Clarifies Shivamogga Court Verdict Hosanagara Police Thirthahalli Police Reservoir Water Shivamogga

50% Discount ಶಿವಮೊಗ್ಗ : ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ 2026ರ ಆಗಸ್ಟ್ ತಿಂಗಳು ಪೂರ್ತಿ ಕನ್ನಡ ಪುಸ್ತಕ ಪ್ರಾಧಿಕಾರದ ಎಲ್ಲಾ ಪುಸ್ತಕಗಳನ್ನು ಶೇ.50%ರ ರಿಯಾಯಿತಿ ದರಗಳಲ್ಲಿ ಮಾರಾಟ ಮಾಡಲಾಗುವುದು ಎಂದು ಪ್ರಾಧಿಕಾರದ ಆಡಳಿತಾಧಿಕಾರಿ ಕೆ.ಬಿ. ಕಿರಣ್ ಸಿಂಗ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಶಿವಮೊಗ್ಗ :  ಗುಡ್ಡೇಕಲ್​​  ಜಾತ್ರೆಗೆ ಡೇಟ್​ ಫಿಕ್ಸ್​​ : ಯಾವಾಗ ? 

ಬೆಂಗಳೂರಿನ ಕನ್ನಡ ಭವನದ ಸಿರಿಗನ್ನಡ ಪುಸ್ತಕ ಮಳಿಗೆಯಲ್ಲಿ ಹಾಗೂ ಎಲ್ಲಾ ಜಿಲ್ಲೆಗಳ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಹಾಗೂ ಕನ್ನಡ ಪುಸ್ತಕ ಪ್ರಾಧಿಕಾರದಿಂದ ತೆರೆಯಲಾದ ಎಲ್ಲಾ ಸಿರಿಗನ್ನಡ ಪುಸ್ತಕ ಮಾರಾಟ ಮಳಿಗೆಗಳಲ್ಲಿ ಈ ರಿಯಾಯಿತಿ ಸೌಲಭ್ಯ ದೊರೆಯಲಿದೆ. 

ಅಲ್ಲದೆ ಕನ್ನಡ ಪುಸ್ತಕ ಪ್ರಾಧಿಕಾರದ ಆನ್ ಲೈನ್ https://kpp.Karnataka.gov.in ಆನ್‌ಲೈನ್ ಪುಸ್ತಕ ಖರೀದಿಗೆ ವಿಭಾಗದಲ್ಲಿ ಕೂಡ ಈ ಶೇ.50% ರಿಯಾಯಿತಿ ಲಭ್ಯವಿದೆ.ಕನ್ನಡ ಪುಸ್ತಕ ಪ್ರಾಧಿಕಾರವು ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ಸಂಬಂಧಿಸಿದಂತೆ, ಎಲ್ಲಾ ಪ್ರಕಾರದ ಸಾಹಿತ್ಯ ಕೃತಿಗಳನ್ನು ಈವರೆಗೆ ಪ್ರಕಟಿಸುತ್ತಾ ಬಂದಿದೆ. ಇವುಗಳಲ್ಲಿ ವ್ಯಕ್ತಿ ಚಿತ್ರಗಳು, ನಾಟಕಗಳು, ಅಲೆಮಾರಿ ಸಮುದಾಯ, ವೈದ್ಯಕೀಯ, ಪ್ರಾಚೀನ ಕನ್ನಡ ಸಾಹಿತ್ಯ, ಜಾನಪದ, ಪರಿಸರ, ಕೃತಿ ಹೀಗೆ ಹಲವು ಹತ್ತು ಪ್ರಕಾರಗಳಲ್ಲಿ ಸಾಹಿತ್ಯ ಕೃತಿಗಳನ್ನು ಇದುವರೆಗೆ ಸುಮಾರು 769 ಶೀರ್ಷಿಕೆಗಳನ್ನು ಮುದ್ರಿಸಿ ಪ್ರಕಟಿಸಿದೆ. ಅತ್ಯಂತ ಮೌಲಿಕವಾದ, ಪ್ರಾಜ್ಞರಿಂದ ರಚಿತವಾದ ಈ ಕೃತಿಗಳನ್ನು ಜನಸಾಮಾನ್ಯರಿಗೆ ಸುಲಭದ ಬೆಲೆಯಲ್ಲಿ ತಲುಪಿಸಬೇಕೆಂಬ ಉದ್ದೇಶ ಕನ್ನಡ ಪುಸ್ತಕ ಪ್ರಾಧಿಕಾರದ್ದಾಗಿದ್ದು, ಪುಸ್ತಕ ಪ್ರಿಯರು ಈ ಅವಕಾಶ ಬಳಸಿಕೊಳ್ಳುವಂತೆ. 

ಹಂಚಿಕೊಳ್ಳಿ
WhatsApp Facebook X Telegram
Prathapa thirthahalli
ಲೇಖಕರ ಬಗ್ಗೆ

Prathapa thirthahalli

Malenadu Today Contributor