Mumbai Police ಶಿವಮೊಗ್ಗ : ಮಲೆನಾಡು ಟುಡೆ ಸುದ್ದಿ: ಮುಂಬಯಿ ಸೈಬರ್ ಕೈಂ ಪೊಲೀಸರಂತೆ (Mumbai Police)ನಟಿಸಿ ವೃದ್ಧರೊಬ್ಬರ ಖಾತೆಯಲ್ಲಿದ್ದ 51.30 ಲಕ್ಷರೂ. ವಂಚನೆ ಮಾಡಿರುವ ಘಟನೆ ನಡೆದಿದೆ. ಶಿವಮೊಗ್ಗ ನಗರದ 73 ವರ್ಷದ ವ್ಯಕ್ತಿಯೊಬ್ಬರಿಗೆ ಸೈಬರ್ ಕೈಂ ಪೊಲೀಸರೆಂದು ಕರೆ ಮಾಡಿ, ಬ್ಯಾಂಕ್ ಖಾತೆಯಿಂದ ಪಿಎಫ್‌ಐ ಸಂಘಟನೆಯು 2 ಕೋಟಿ ರೂ. ವನ್ನು ಜಮಾ ಮಾಡಿದ್ದು, ಅದರಿಂದ 20 ಲಕ್ಷ ರೂ. ಕಮಿಷನ್ ಪಡೆದಿರುವುದಾಗಿ ಆರೋಪಿಸಲಾಗಿದೆ. ಅದಕ್ಕಾಗಿ ಪ್ರಕರಣ ದಾಖಲಾಗಿರುವುದಾಗಿ ಬೆದರಿಸಿ ನಕಲಿ ಅರೆಸ್ಟ್ ವಾರೆಂಟ್ ತೋರಿಸಲಾಗಿದೆ. ಅಲ್ಲದೆ ಬ್ಯಾಂಕ್ ಖಾತೆಯಲ್ಲಿರುವ ಹಣವನ್ನು
ಆರ್‌ಬಿಐಗೆ ಕಳುಹಿಸಿ ಪರಿಶೀಲಿಸಲಾಗುವುದು ಎಂದು ತಿಳಿಸಿದ್ದರು. ಬಳಿಕ 51,30,402 ರೂ. ವರ್ಗಾವಣೆ ಮಾಡಿಕೊಂಡು ವಂಚಿಸಿದ್ದಾರೆ ಎಂದು ತಿಳಿದುಬಂದಿದೆ. ಈ ಸಂಬಂಧ ಸಂತ್ರಸ್ತರು ದಾಖಲಿಸಿರುವ ದೂರಿನನ್ವಯ ಶಿವಮೊಗ್ಗ ಸಿಇಎನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಲೆನಾಡು ಟುಡೆ ಡಿಜಿಟಲ್ ನ್ಯೂಸ್ ಮೀಡಿಯಾ ಶಿವಮೊಗ್ಗವನ್ನೂ ಕೇಂದ್ರಿಕರಿಸಿಕೊಂಡು ಸ್ಥಳೀಯ ವಿಷಯಗಳಿಂದ ಸಕಲ ವಿಚಾರಗಳನ್ನು ಜನರಿಗೆ ಮುಟ್ಟಿಸುವ ಮಾಹಿತಿ ಸಂಸ್ಥೆಯಾಗಿದೆ. ನೀವು ನಮ್ಮನ್ನು Facebook whatsapp whatsapp chanel instagram youtube telegram google business malenadu today epaper malenadutoday web ನಲ್ಲಿ ಬೆಂಬಲಿಸಬಹುದು.. ಸಾದ್ಯವಾದಷ್ಟು ನಮ್ಮ ಪ್ರಯತ್ನಕ್ಕೆ ನಿಮ್ಮ ಬೆಂಬಲವನ್ನು ನೀಡಿ..ಇಲ್ಲಿ ನಿಮ್ಮ ಸಹಕಾರವೇ ಮುಖ್ಯ!
