ಶಿವಮೊಗ್ಗ ಜಿಲ್ಲೆಯಲ್ಲಿ 7 ರೈಲ್ವೆ ಮೇಲ್ಸೇತುವೆ ನಿರ್ಮಾಣ ಸಂಸದ ಬಿ.ವೈ. ರಾಘವೇಂದ್ರ! ಎಲ್ಲೆಲ್ಲಿ?

ಕೊನೆಯ ನವೀಕರಣ: 29 ಜೂನ್ 2026, 12:29 ಅಪರಾಹ್ನ

ಹಂಚಿಕೊಳ್ಳಿ
WhatsApp Facebook X Telegram
Central Government Funds 7 Railway Overbridges in Shivamogga, Says MP B.Y. Raghavendra

Railway Overbridges in Shivamogga / ಮಲೆನಾಡು ಟುಡೆ ಸುದ್ದಿ/ ಶಿವಮೊಗ್ಗ / ಶಿವಮೊಗ್ಗ ಲೋಕಸಭೆ ಕ್ಷೇತ್ರದ ವ್ಯಾಪ್ತಿಯಲ್ಲಿ 300 ಕೋಟಿ ರೂ. ವೆಚ್ಚದಲ್ಲಿ ಒಟ್ಟು ಏಳು ರೈಲ್ವೆ ಮೇಲ್ಸೇತುವೆಗಳಿಗೆ ಕೇಂದ್ರ ಸರ್ಕಾರ ಅನುಮತಿ ನೀಡಿದ್ದು ಕೂಡಲೇ ಕಾಮಗಾರಿ ಸಹ ಆರಂಭಿಸಲಾಗುತ್ತದೆ ಅಂತಾ ಸ್ವತಃ ಸಂಸದ ಬಿ.ವೈ.ರಾಘವೇಂದ್ರ ಹೇಳಿದ್ದಾರೆ.

ಇದೇ ಸಂದರ್ಭದಲ್ಲಿ ನಿನ್ನೆ ದಿನ ಅವರು ವಿದ್ಯಾನಗರ, ಚಿಕ್ಕಲ್, ಶಾಂತಮ್ಮ ಲೇಔಟ್, ಅರಕೇಶ್ವರ ದೇವಸ್ಥಾನ, ಅರಣ್ಯ ಸಂರಕ್ಷಣಾಧಿಕಾರಿಗಳ ಕಚೇರಿ, ಗಂಧದ ಕಾರ್ಖಾನೆಗಳಿಗೆ ಸಂಚರಿಸಲು ಲಘು ವಾಹನ ಸಂಚಾರ ಮತ್ತು ಪಾದಚಾರಿಗಳಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಅಂದಾಜು 3 ಕೋಟಿ ರೂ. ವೆಚ್ಚದಲ್ಲಿ ಅಂಡರ್‌ಪಾಸ್​ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿದರು

ತಲಾ 70 ಕೋಟಿ ರೂ. ವೆಚ್ಚದಲ್ಲಿ ಹೊಸೂರು, ತಾಳಗುಪ್ಪ ಹಾಗೂ ನಗರದ ಬೊಮ್ಮನ ಕಟ್ಟೆ ಹಾಗೂ ಗುಂಡಪ್ಪ ಶೆಡ್​ನಲ್ಲಿ ಅಲ್ಲದೆ, ತಲಾ 60 ಕೋಟಿ ರೂ. ವೆಚ್ಚದಲ್ಲಿ ಕುಂಸಿ, ಯಡೆಹಳ್ಳಿ ಸಮೀಪ ರೈಲ್ವೆ ಮೇಲ್ಸೇತುವೆ ಕಾಮಗಾರಿಗಳನ್ನು ಪ್ರಾರಂಭಿಸಲು ಅನುದಾನ ನೀಡಲಾಗಿದೆ ಎಂದು ತಳಿಸಿದ ಸಂಸದ ಬಿ.ವೈ ರಾಘವೇಂದ್ರ ಈವರೆಗೆ ಸುಮಾರು 20 ಸಾವಿರ ಕೋಟಿ ರೂ.ಗೂ ಅಧಿಕ ವೆಚ್ಚದ ಹೆದ್ದಾರಿ ಮತ್ತು ರೈಲ್ವೆ ಕಾಮಗಾರಿಗಳಿಗೆ ಅನುದಾನ ದೊರಕಿದ್ದು, ಜಿಲ್ಲೆ ಅಭಿವೃದ್ಧಿ ಪಥದಲ್ಲಿ ಮುನ್ನುಗ್ಗುತ್ತಿದೆ ಎಂದರು.

ಇನ್ನೂ ಇದೇ ವೇಳೆ ವಿದ್ಯಾನಗರದ ವೃತ್ತಾಕಾರದ ಮೇಲ್ವೇಸುವೆ, ಸವಳಂಗ ರಸ್ತೆಯ ಮೇಲ್ಸೇತುವೆ ಮತ್ತು ಅಂಡರ್ ಪಾಸ್, ಸೋಮಿನಕೊಪ್ಪ ರಸ್ತೆಯಲ್ಲಿ ಮೇಲ್ಸೇತುವೆ, ಪಿ ಆಂಡ್ ಟಿ ಕಾಲೊನಿಯಲ್ಲಿ ಅಂಡ‌ರ್ ಪಾಸ್ ಮತ್ತು ಭದ್ರಾವತಿ ಸಮೀಪದ ಕಡದಕಟ್ಟೆ ಬಳಿ ಮೇಲ್ಸೇತುವೆ ನಿರ್ಮಿಸಿ ಲೋಕಾರ್ಪಣೆ ಗೊಳಿಸಲಾಗಿದೆ. ಎಂ.ಆರ್. ಎಸ್‌ನಿಂದ ಬಸ್‌ ನಿಲ್ದಾಣದವರೆಗೆ ಹಾಗೂ ನಗರದ ವಿವಿಧ 4 ಪ್ರಮುಖ ವೃತ್ತಗಳ ಅಭಿವೃದ್ಧಿಗೆ ಸರಕಾರಕ್ಕೆ ಈಗಾಗಲೇ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಶಾಸಕರಾದ ಎಸ್.ಎನ್.ಚನ್ನಬಸಪ್ಪ, ಪರಿಷತ್ ಸದಸ್ಯ ಡಿ.ಎಸ್.ಅರುಣ್ ಮುಖಂಡ ಜಗದೀಶ್, ಯಮುನಾ ರಂಗೇಗೌಡ, , ಸುರೇಖಾ ಮುರಳೀಧರ್, ಮೋಹನರೆಡ್ಡಿ ಸೇರಿದಂತೆ ರೈಲ್ವೆ ಅಧಿಕಾರಿಗಳು ಹಾಗೂ ಇಲಾಖೆ ಗುತ್ತಿಗೆದಾರರು ಉಪಸ್ಥಿತರಿದ್ದರು.

ನಿಮ್ಮ ವಾಟ್ಸಾಪ್​ಗೆ ಸುದ್ದಿ ಕಳುಹಿಸಲು ಕ್ಲಿಕ್​ ಮಾಡಿ ಗ್ರೂಪ್​ಗೆ ಜಾಯಿನ್ ಆಗಿ :  Whatsapp / https://chat.whatsapp.com/JrsZ8He4nN600n0r3tJItz

ವಿಷಯಗಳು:
ಹಂಚಿಕೊಳ್ಳಿ
WhatsApp Facebook X Telegram
ajjimane ganesh
ಲೇಖಕರ ಬಗ್ಗೆ

ajjimane ganesh

Malenadu Today Contributor