Shivamogga | Jan 30, 2024 | Thirthahalli Basavani ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲ್ಲೂಕು ಬಸವಾನಿ ಸಮೀಪ 9 ತರಗತಿ ವಿದ್ಯಾರ್ಥಿನಿಯೊಬ್ಬಳ ಮೃತದೇಹ ಕಾಡಿನಲ್ಲಿ ಪತ್ತೆಯಾಗಿದೆ. ನೇಣು ಬಿಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದ್ದು ತೀರ್ಥಹಳ್ಳಿ ಪೊಲೀಸ್ ಸ್ಟೇಷನ್ ಲಿಮಿಟ್ಸ್ ನಲ್ಲಿ ಘಟನೆ ನಡೆದಿದೆ.
ತೀರ್ಥಹಳ್ಳಿ ಪೊಲೀಸ್ ಸ್ಟೇಷನ್
ತೀರ್ಥಹಳ್ಳಿ ಬಸವಾನಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಶಾಲೆಯೊಂದರಲ್ಲಿ ವಿದ್ಯಾರ್ಥಿನಿ ಓದುತ್ತಿದ್ದಳು. ಮೂಲಗಳ ಪ್ರಕಾರ, ಈಕೆ ಶಾಲೆಗೆ ಕೆಲವು ದಿನಗಳಿಂದ ಹೋಗಿರಲಿಲ್ಲ ಎನ್ನಲಾಗುತ್ತಿದೆ. ನಿನ್ನೆ ಸೋಮವಾರ ಸಮೀಪದ ಪ್ಲಾಂಟೇಷನ್ ಕಾಡಿನಲ್ಲಿ ವಿದ್ಯಾರ್ಥಿನಿಯ ಶವ ಪತ್ತೆಯಾಗಿದೆ.
ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿದ್ದು, ಸಾವಿನ ಕಾರಣ ಮತ್ತು ಘಟನೆಯ ವಿವರ ಇನ್ನಷ್ಟೆ ತನಿಖೆ ನಡೆದು ತಿಳಿಯಬೇಕಿದೆ. ಸದ್ಯ ಪ್ರಕರಣ ದಾಖಲಿಸಿರುವ ಪೊಲೀಸರು ತನಿಖೆ ನಡೆಸ್ತಿದ್ದಾರೆ. ವಿದ್ಯಾರ್ಥಿನಿಯ ವೈಯಕ್ತಿಕ ವಿವರವನ್ನು ಗೌಪ್ಯವಾಗಿ ಇಡಲಾಗಿದೆ.