State Government employees : ರಾಜ್ಯ ಸರ್ಕಾರಿ ನೌಕರರಿಗೆ ಮಹತ್ವದ ಸುದ್ದಿ : ಮೇ 15 ರಿಂದ ಈ ಪ್ರಕ್ರಿಯೆ ಆರಂಭ!

Malenadu Today
State Government employees  ವರ್ಗಾವಣೆ ಬಯುಸುತ್ತಿರುವ ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರ ಮಹತ್ವದ ಮಾಹಿತಿ ನೀಡಿದೆ. ಇದೇ ಮೇ 15ರಿಂದ ನೌಕರರ ಸಾರ್ವತ್ರಿಕ ವರ್ಗಾವಣೆ ನಡೆಯಲಿದೆ. ಈ ಸಂಬಂಧ ಅಂದರೆ, ರಾಜ್ಯ ಸರ್ಕಾರಿ ನೌಕರರ ಸಾರ್ವತ್ರಿಕ ವರ್ಗಾವಣೆಗೆ ಸಂಬಂಧಿಸಿದಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆಗಳ ಇಲಾಖೆ ಅಧಿಕೃತ ಆದೇಶ ಹೊರಡಿಸಿದ್ದು, ಇದೇ 15ರಿಂದ ಜೂನ್‌ 14 ರವರೆಗೆ ವರ್ಗಾವಣೆ ಪ್ರಕ್ರಿಯೆ ನಡೆಯಲಿದೆ. ಗ್ರೂಪ್‌–ಎ, ಗ್ರೂಪ್‌–ಬಿ, ಗ್ರೂಪ್‌–ಸಿ, ಮತ್ತು ಗ್ರೂಪ್‌– ಡಿ ಹುದ್ದೆಗಳಿಗೆ ಮಾಡಲಾಗುವ ವರ್ಗಾವಣೆಗಳ ಸಂಖ್ಯೆಯು ಆಯಾ ವೃಂದಗಳ ಕಾರ್ಯನಿರತ ವೃಂದ ಬಲದ ಶೇ 6 ಅನ್ನು ಮೀರಬಾರದು ಎಂದು ಸೂಚಿಸಲಾಗಿದೆ. ಗ್ರೂಪ್‌–ಎ, ಗ್ರೂಪ್‌–ಬಿ ವೃಂದದ ಅಧಿಕಾರಿಗಳಿಗೆ ಸಂಬಂಧಿಸಿದಂತೆ ಆಯಾ ಇಲಾಖೆ ಸಚಿವರಿಗೆ ಹಾಗೂ ಗ್ರೂಪ್‌–ಸಿ ಮತ್ತು ಗ್ರೂಪ್‌–ಡಿ ವೃಂದದ ನೌಕರರಿಗೆ ಸಂಬಂಧಿಸಿದಂತೆ ಆಯಾ ನೇಮಕಾತಿ ಪ್ರಾಧಿಕಾರಗಳಿಗೆ ಅಧಿಕಾರ ನೀಡಲಾಗಿದೆ.

State Government employees transper

ಎ ಮತ್ತು ಬಿ ವೃಂದದ ಹುದ್ದೆಗಳಲ್ಲಿ 2 ವರ್ಷ, ಸಿ ವೃಂದದ ಹುದ್ದೆಯಲ್ಲಿ 4 ವರ್ಷ ಹಾಗೂ ಡಿ ವೃಂದದ ಹುದ್ದೆಗಳಲ್ಲಿ 7 ವರ್ಷ ಪೂರ್ಣಗೊಳಿಸಿದವರನ್ನು ವರ್ಗಾವಣೆ ಮಾಡಬಹುದಾಗಿದೆ ಎಂದು ಸೂಚಿಸಲಾಗಿದೆ. ಅಲ್ಲದೆ  ಎ ಮತ್ತು ಬಿ ವೃಂದದ ಅಧಿಕಾರಿಗಳಿಗೆ ಸಂಬಂಧಿಸಿದ ವರ್ಗಾವಣೆ ಪ್ರಸ್ತಾವನೆಗಳನ್ನು ಸಚಿವಾಲಯದ ಆಡಳಿತ ಇಲಾಖೆಗಳ ಮೂಲಕವೇ ಸಚಿವರಿಗೆ ಸಲ್ಲಿಸಬೇಕು ಎಂದು ವಿವರಿಸಲಾಗಿದೆ. 

State Government employees 

ಹೈದರಾಬಾದ್‌ ಕರ್ನಾಟಕ ಪ್ರದೇಶದ ಕಚೇರಿಗಳಲ್ಲಿ ವಿವಿಧ ವೃಂದಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆದುರಾಗಿ ನೇಮಕ ಗೊಂಡ ನೌಕರರನ್ನು ಅವರ ನೇಮಕಾತಿ ದಿನಾಂಕದಿಂದ ಕನಿಷ್ಠ 10 ವರ್ಷಗಳವರೆಗೆ ಹೈದರಾಬಾದ್‌ ಕರ್ನಾಟಕ ಪ್ರದೇಶ ಹೊರತು ಪಡಿಸಿ ಬೇರೆಡೆ ವರ್ಗಾವಣೆ ಮಾಡುವಂತಿಲ್ಲ ಎಂದು ಸ್ಪಷ್ಟ ಪಡಿಸಲಾಗಿದೆ. 

 

Share This Article