shivamogga news : ಸರ್ಕಾರಿ ಶಾಲೆಯ ಸೌಲಭ್ಯಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು | ಮಂಜುನಾಥ್

prathapa thirthahalli
Prathapa thirthahalli - content producer

shivamogga news : ಸರ್ಕಾರಿ ಶಾಲೆಯ ಸೌಲಭ್ಯಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು | ಮಂಜುನಾಥ್

shivamogga news : ಶಿವಮೊಗ್ಗ : ಸರ್ಕಾರಿ ಶಾಲೆಗಳಲ್ಲಿ ಉತ್ತಮ ಗುಣಮಟ್ಟದ ಶಿಕ್ಷಣದ ಜೊತೆಗೆ ಉಚಿತ ಸಮವಸ್ತ್ರ ಪಠ್ಯಪುಸ್ತಕ ಹಾಗೂ ವಿದ್ಯಾರ್ಥಿವೇತನವನ್ನು ನೀಡುತ್ತಿದ್ದು, ವಿದ್ಯಾರ್ಥಿಗಳು ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕೆಂದು ಶಿಕ್ಷಣ ಇಲಾಖೆಯ ಆಡಳಿತ ಉಪ ನಿರ್ದೇಶಕರಾದ ಮಂಜುನಾಥ್ ಹೇಳಿದರು.

ನಗರದ ಬಿಹೆಚ್ ರಸ್ತೆಯಲ್ಲಿರುವ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಸೋಮವಾರ ಆಯೋಜಿಸಿದ್ದ ತಾಲ್ಲೂಕು ಮಟ್ಟದ ನಮ್ಮ ಶಾಲೆ ನಮ್ಮ ಜವಾಬ್ದಾರ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಸರ್ಕಾರಿ ಶಾಲೆಗಳು ಶಿಕ್ಷಣವನ್ನು ಮಾತ್ರವಲ್ಲದೆ ವಿದ್ಯಾರ್ಥಿಗಳ ಓದಿಗೆ ಪೂರಕವಾದ ಯೂನಿಫಾರ್ಮ್, ಶೂ, ಸಾಕ್ಸ್ ಒಳಗೊಂಡಂತೆ ಅಗತ್ಯ ಸೌಲಭ್ಯಗಳನ್ನು ಉಚಿತವಾಗಿ ಪೂರೈಸುತ್ತಿದೆ. ಪಿ.ಎಂ ಪೋಷಣ್ ಮಧ್ಯಾಹ್ನ ಉಪಹಾರ ಯೋಜನೆ ಅಡಿಯಲ್ಲಿ ಬಿಸಿ ಊಟ, ಕೆನೆಭರಿತ ಹಾಲು, ರಾಗಿ ಮಾಲ್ಟ್, ಪೌಷ್ಟಿಕತೆಗೆ ಪೂರಕವಾದ ಮೊಟ್ಟೆ ಹಾಗೂ ಬಾಳೆಹಣ್ಣನ್ನು ನೀಡಲಾಗುತ್ತಿದೆ. 

ಇದಲ್ಲದೆ ಸರ್ಕಾರಿ ಶಾಲೆಯಲ್ಲಿ ಓದುತ್ತಿರುವ ಎಲ್ಲಾ ಮಕ್ಕಳಿಗೆ ಆರೋಗ್ಯದ ಹಿತದೃಷ್ಟಿಯಿಂದ ದೇಹದಲ್ಲಿ ಉಂಟಾಗುವAತಹ ರಕ್ತಹೀನತೆಯನ್ನು ಹೋಗಲಾಡಿಸಲು ಕಬ್ಬಿಣ ಮಾತ್ರೆಗಳನ್ನು ನೀಡಲಾಗುತ್ತಿದೆ. ಆದ್ದರಿಂದ ಪೋಷಕರು ತಮ್ಮ ಮಕ್ಕಳನ್ನು ಖಾಸಗಿ ಶಾಲೆಗೆ ಕಳುಹಿಸದೆ ಸರ್ಕಾರಿ ಶಾಲೆಗಳಿಗೆ ಸೇರಿಸಿ ಈ ಮೂಲಕ ಸರ್ಕಾರಿ ಶಾಲೆಗಳ ಉನ್ನತಿಗಾಗಿ ಶ್ರಮಿಸಲು ಸಹಕಾರ ನೀಡಿ ಎಂದು ಕೋರಿದರು.

 

Share This Article