rain prediction shivamogga today / ಇವತ್ತು ಸಹ 5 ಜಿಲ್ಲೆಗಳಿಗೆ ರೆಡ್​ ಅಲರ್ಟ್! ಶಿವಮೊಗ್ಗದಲ್ಲಿ ಭಾರೀ ಮಳೆ

ಹಂಚಿಕೊಳ್ಳಿ
WhatsApp Facebook X Telegram
Tunga Dam water level Tunga and Bhadra Dam
Tunga and Bhadra Dam

rain prediction shivamogga today ಐಎಂಡಿ ಬೆಂಗಳೂರು ಇದರ ಅಧಿಕೃತ ವೆಬ್​ಸೈಟ್​ನಲ್ಲಿ ತೋರಿಸಿರುವಂತೆ ಶಿವಮೊಗ್ಗ ಚಿಕ್ಕಮಗಳೂರು ಹಾಸನ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಿಗೆ ರೆಡ್ ಅಲರ್ಟ್ ನೀಡಲಾಗಿದೆ. ಉತ್ತರ ಕನ್ನಡ, ಬೆಳಗಾವಿ, ಬೀಜಾಪುರ, ಬಾಗಲಕೋಟೆ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್  ನೀಡಲಾಗಿದ್ದು, ಭಾರೀ ಮಳೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ

ಇನ್ನೂ ನಿನ್ನೆ ದಿನ ಕೊಟ್ಟಿಗೆಹಾರದಲ್ಲಿ ಅತಿಹೆಚ್ಚು ಮಳೆ ಅಂದರೆ, 22 ಸೆಂಟಿ ಮೀಟರ್ ಮಳೆಯಾಗಿದ್ದು ಆಗುಂಬೆಯಲ್ಲಿ  12 ಸೆಂಟಿ ಮೀಟರ್ ಮಳೆಯಾಗಿದೆ. 

ಇವತ್ತು ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ  ಆಯ್ದ ಸ್ಥಳಗಳಲ್ಲಿ ನಿರಂತರ ಗಾಳಿಯೊಂದಿಗೆ (50-60 ಕಿ.ಮೀ. ವೇಗದಲ್ಲಿ ) ರೆಡ್​ ಅಲರ್ಟ್ ಪ್ರದೇಶಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. 

rain prediction shivamogga today

ಕೊಡಗು ಮತ್ತು ಹಾಸನ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ನಿರಂತರ ಗಾಳಿಯೊಂದಿಗೆ (50-60 ಕಿ.ಮೀ.) ಭಾರೀ ಮಳೆಯಾಗುವ ಸಾಧ್ಯತೆ ಇದೆ.ಮೈಸೂರು, ಮಂಡ್ಯ ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ನಿರಂತರ ಗಾಳಿಯೊಂದಿಗೆ (40-50 ಕಿ.ಮೀ.) ಭಾರೀ ಮಳೆಯಾಗುವ ಸಾಧ್ಯತೆ ಇದೆ.

ಬಳ್ಳಾರಿ, ಬೆಂಗಳೂರು (ಗ್ರಾಮೀಣ), ಬೆಂಗಳೂರು (ನಗರ), ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ರಾಮನಗರ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಹೆಚ್ಚಿನ ಸ್ಥಳಗಳಲ್ಲಿ ನಿರಂತರ ಗಾಳಿಯೊಂದಿಗೆ (40-50 ಕಿ.ಮೀ.) ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. 

rain prediction shivamogga today

ಹಂಚಿಕೊಳ್ಳಿ
WhatsApp Facebook X Telegram
Malenadu Today
ಲೇಖಕರ ಬಗ್ಗೆ

Malenadu Today

Malenadu Today Contributor