shivamogga rain news today live / 8 ಜಿಲ್ಲೆಗೆ ರೆಡ್​! 3 ಜಿಲ್ಲೆಗೆ ಆರೆಂಜ್​, 8 ಜಿಲ್ಲೆಗೆ ಯಲ್ಲೋ ಅಲರ್ಟ್​!

Malenadu Today

shivamogga rain news today live ಶಿವಮೊಗ್ಗ, ಬಾಗಲಕೋಟೆ, ಬೆಳಗಾವಿ, ಉತ್ತರಕನ್ನಡ, ಉಡುಪಿ, ದಕ್ಷಿಣ ಕನ್ನಡ,  ಹಾಸನ, ಚಿಕ್ಕಮಗಳೂರು ಜಿಲ್ಲೆಗಳಿಗೆ ಇವತ್ತು ರೆಡ್​ ಅಲರ್ಟ್ ನೀಡಲಾಗಿದೆ. ಬೀಜಾಪುರ, ಹಾಸನ ಮತ್ತು ಕೊಡಗು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ. ಬೀದರ್ ಗುಲ್ಬರ್ಗಾ, ರಾಯಚೂರು, ಬಳ್ಳಾರಿ,ಧಾರವಾಡ, ದಾವಣಗೆರೆ, ಮೈಸೂರು ಚಾಮರಾಜನಗರ ಜಿಲ್ಲೆಗಳಿಗೆ ಇಂದು ಯಲ್ಲೋ ಅಲರ್ಟ್ ನೀಡಲಾಗಿದೆ. ಐಎಂಡಿ ಬೆಂಗಳೂರು ಇದರ ಅಧಿಕೃತ ವೆಬ್​ಸೈಟ್ ಮಾಹಿತಿಯ ಜಿಲ್ಲಾವಾರು ರಿಪೋರ್ಟ್​ನಲ್ಲಿ ಈ ಬಗ್ಗೆ ತಿಳಿಸಲಾಗಿದೆ. 

shivamogga rain news today live

ಇನ್ನೂ ಐಎಂಡಿ ಡೈಲಿ ಬುಲೆಟಿನ್ ಪ್ರಕಾರ, ಕೊಡಗು, ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಗಾಳಿಯೊಂದಿಗೆ (50-60 ಕಿ.ಮೀ.) ಭಾರೀಯಿಂದ ಅತಿ ಭಾರಿ ಮಳೆಯಾಗುವ ಸಾಧ್ಯತೆದಾವಣಗೆರೆ, ಹಾಸನ ಮತ್ತು ಮೈಸೂರು ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಗಾಳಿಯೊಂದಿಗೆ (40-50 ಕಿ.ಮೀ.) ಭಾರೀ ಮಳೆಯಾಗುವ ಸಾಧ್ಯತೆ ಬಳ್ಳಾರಿ, ಬೆಂಗಳೂರು (ಗ್ರಾಮೀಣ), ಬೆಂಗಳೂರು (ನಗರ), ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಕೋಲಾರ, ಮಂಡ್ಯ, ರಾಮನಗರ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಹಲವೆಡೆ ಗಾಳಿಯೊಂದಿಗೆ (40-50 ಕಿ.ಮೀ.) ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

Share This Article