shivamogga dcc bank case status ಶಿವಮೊಗ್ಗ ಡಿಸಿಸಿ ಬ್ಯಾಂಕ್ ಹಗರಣದಲ್ಲಿ ಅಧ್ಯಕ್ಷ ಆರ್ಎಂ ಮಂಜುನಾಥ್ ಗೌಡರ ಜಾಮೀನು ಅರ್ಜಿಗೆ ಸಂಬಂಧಿಸಿದಂತೆ ಹೈಕೋರ್ಟ್ ಜಾರಿ ನಿರ್ದೇಶನಾಲಯಕ್ಕೆ ನೋಟಿಸ್ ಜಾರಿ ಮಾಡಿದೆ. ಡಿಸಿಸಿ ಬ್ಯಾಂಕ್ನಲ್ಲಿ ನಕಲಿ ಚಿನ್ನವನ್ನು ಅಡವಿಟ್ಟು ಕೋಟ್ಯಂತರ ರೂಪಾಯಿ ವಂಚನೆ ಮಾಡಿದ ಆರೋಪದಲ್ಲಿ, Prevention of Money Laundering Act (PMLA) ಅಡಿಯಲ್ಲಿ ಬಂಧಿತರಾಗಿರುವ ಬ್ಯಾಂಕಿನ ಅಧ್ಯಕ್ಷ ಆರ್.ಎಂ. ಮಂಜುನಾಥಗೌಡರ ಜಾಮೀನು ಅರ್ಜಿಗೆ ಸಂಬಂಧಿಸಿದಂತೆ, ಕರ್ನಾಟಕ ಹೈಕೋರ್ಟ್ ಮಂಗಳವಾರ (ಮೇ 28) ಜಾರಿ ನಿರ್ದೇಶನಾಲಯಕ್ಕೆ (ED) ನೋಟಿಸ್ ಜಾರಿ ಮಾಡಿದೆ. ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರ ರಜಾ ಪೀಠವು ಮಂಜುನಾಥಗೌಡರ ಅರ್ಜಿಯನ್ನು ಪರಿಗಣಿಸಿ, EDಗೆ ಪ್ರತಿಕ್ರಿಯೆ ಸಲ್ಲಿಸುವಂತೆ ನಿರ್ದೇಶನ ನೀಡಿದೆ. ಪ್ರಕರಣದ ಮುಂದಿನ ವಿಚಾರಣೆಯನ್ನು ಜೂನ್ 5ಕ್ಕೆ ಮುಂದೂಡಲಾಗಿದೆ.

shivamogga dcc bank case status
2014ರಲ್ಲಿ ಶಿವಮೊಗ್ಗ ಡಿಸಿಸಿ ಬ್ಯಾಂಕ್ ಗಾಂಧಿ ಬಜಾರ್ ಶಾಖೆಯಲ್ಲಿ 62.77 ಕೋಟಿ ರೂಪಾಯಿಗಳ ಬಂಗಾರ ಅಡಮಾನ ಸಾಲ ವಂಚನೆ ಬಯಲಾಗಿತ್ತು. ಈ ಪ್ರಕರಣದಲ್ಲಿ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಮೊದಲ ದೂರು ದಾಖಲಾಗಿತ್ತು. ತನಿಖೆಯ ನಂತರ, 2014ರ ಅಕ್ಟೋಬರ್ 18ರಂದು ಪೊಲೀಸರು ನ್ಯಾಯಾಲಯಕ್ಕೆ ಜಾರ್ಜ್ಶೀಟ್ ಸಲ್ಲಿಸಿದ್ದರು. 1997ರಿಂದ 2020ರವರೆಗೆ ಬ್ಯಾಂಕ್ ಅಧ್ಯಕ್ಷರಾಗಿದ್ದ ಮಂಜುನಾಥಗೌಡರ ವಿರುದ್ಧ ED 2023ರ ಅಕ್ಟೋಬರ್ 6ರಂದು ಸಮನ್ಸ್ ಜಾರಿ ಮಾಡಿತ್ತು.