kamal hassan : ಹಿರಿಯ ನಟ ಕಮಲ್ ಹಾಸನ್ ತಮಿಳಿನಿಂದಲೇ ಕನ್ನಡ ಹುಟ್ಟಿದ್ದು ಎಂಬ ಹೇಳಿಕೆಗೆ ರಾಜ್ಯದೆಲ್ಲೆಡೆ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಅದರಂತೆ ಇಂದು ಶಿವಮೊಗ್ಗದಲ್ಲಿ ಇಂದು ಕನ್ನಡ ಕಾರ್ಮಿಕ ರಕ್ಷಣಾ ವೇದಿಕೆ ಕಾರ್ಯಕರ್ತರು ಕಮಲ್ ಹಾಸನ್ ಪ್ರತಿಕೃತಿ ಧಹಿಸಿ ಆಕ್ರೋಶ ವ್ಯಕ್ತಪಡಿಸಿದರು.
kamal hassan : ಆಕ್ರೋಶಕ್ಕೆ ಕಾರಣವೇನು
ಮಣಿರತ್ನಂ ನಿರ್ದೇಶಿಸಿ ಕಮಲ್ ಹಾಸನ್ ನಟಿಸಿರುವ ಥಗ್ ಲೈಫ್ ಚಿತ್ರದ ಧ್ವನಿಸುರುಳಿ ಕಾರ್ಯಕ್ರಮನ್ನು ಚೆನ್ನೈನಲ್ಲಿ ಮೇ 24 ರಂದು ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮದಲ್ಲಿ ಕನ್ನಡದ ಹಿರಿಯ ನಟ ಡಾ. ಶಿವರಾಜ್ ಕುಮಾರ್ ಸಹ ಭಾಗವಹಿಸಿದ್ದರು. ಆವೇಳೆ ಕಮಲ್ ಹಾಸನ್ ಮಾತನಾಡುವಾಗ ಡಾ||ರಾಜ್ಕುಮಾರ್ ಸಹಾಯವನ್ನು ನೆನೆದರು. ಹಾಗೆಯೇ ಮಾತನಾಡುವ ಭರದಲ್ಲಿ ಕನ್ನಡ ಭಾಷೆ ಹುಟ್ಟಿದ್ದೇ ತಮಿಳಿನಿಂದ ಎಂಬ ವಿವಾದಾತ್ಮಕ ಹೇಳಿಕೆಯನ್ನು ನೀಡಿದ್ದರು. ಅವರ ಈ ಒಂದು ಹೇಳಿಕೆ ಇದೀಗ ಅನೇಕ ಕನ್ನಡಾಭಿಮಾನಿಗಳನ್ನು ಕೆರಳಿಸಿದೆ. ಈ ಹಿನ್ನಲೆ ಇಂದು ಶಿವಮೊಗ್ಗದ ಶಿವಪ್ಪನಾಯಕ ವೃತ್ತದ ಬಳಿ ಕಮಲ್ ಹಾಸನ್ ಪ್ರತಿಕೃತಿ ಧಹಿಸಿ ಕನ್ನಡ ಕಾರ್ಮಿಕ ರಕ್ಷಣಾ ವೇದಿಕೆ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.
ಜೂನ್06 ರಂದು ಅವರ ಥಗ್ ಲೈಫ್ ಸಿನಿಮಾ ವಿಶ್ವದಾದ್ಯಂತ ಬಿಡುಗಡೆಯಾಗಲಿದ್ದು, ಈ ವಿವಾದಾತ್ಮಕ ಹೇಳಿಕೆಯಿಂದ ಕರ್ನಾಟಕದಲ್ಲಿ ಸಿನಿಮಾ ಬಿಡುಗಡೆಯಾಗುತ್ತದೆಯೇ ಎಂದು ಕಾದು ನೋಡಬೇಕಿದೆ.
