chikkamagaluru : ಪ್ರೀತಿಸಿ ಮದುವೆಯಾಗಿದ್ದ ಪತ್ನಿಯನ್ನು ಕೊಂದ ಪತಿ
ಪ್ರೀತಿಸಿ ಮದುವೆಯಾಗಿದ್ದ ಪತಿಯೊಬ್ಬ ತನ್ನ ಪತ್ನಿಯನ್ನು ಚಾಕುವಿಂದ ಚುಚ್ಚಿ ಕೊಂದಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಕೈಮರಾ ಚೆಕ್ ಪೋಸ್ಟ್ ನಲ್ಲಿ ನಡೆದಿದೆ. ಕೀರ್ತಿ (26) ಮೃತ ದುರ್ದೈವಿ.
4 ವರ್ಷದ ಹಿಂದೆ ಅವಿನಾಶ್ ಹಾಗೂ ಕೀರ್ತಿ ಪ್ರೀತಿಸಿ ಮದುವೆಯಾಗಿದ್ದರು. ಆದರೆ ಇಂದು ಮದ್ಯಾಹ್ನ ಯಾವುದೋ ಕಾರಣಕ್ಕೆ ಇಬ್ಬರ ನಡುವೆ ಜಗಳ ನಡೆದಿದೆ. ಈ ವೇಳೆ ಕೋಪಗೊಂಡ ಪತಿ ಅವಿನಾಶ್ ಪತ್ನಿ ಕೀರ್ತಿಗೆ 10 ಬಾರಿ ಚಾಕುವಿನಲ್ಲಿ ಇರಿದು ಕೊಂದಿದ್ದಾನೆ. ಘಟನೆ ಸಂಬಂಧ ಚಿಕ್ಕಮಗಳೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ತಲೆಮರೆಸಿಕೊಂಡಿದ್ದಾನೆ.