youth congress ಜಾತಿ ಮತ್ತು ಆದಾಯ ಪ್ರಮಾಣ ಪತ್ರಗಳನ್ನು ತ್ವರಿತಗತಿಯಲ್ಲಿ ಸಿಗುವಂತೆ ಕ್ರಮ ಕೈಗೊಳ್ಳಿ | ಯೂತ್​ ಕಾಂಗ್ರೆಸ್​ ಆಗ್ರಹ

ಹಂಚಿಕೊಳ್ಳಿ
WhatsApp Facebook X Telegram
youth congress
youth congress ಯೂತ್​ ಕಾಂಗ್ರೆಸ್​ ಆಗ್ರಹ

youth congress  ವಿದ್ಯಾರ್ಥಿಗಳ ಜಾತಿ ಮತ್ತು ಆದಾಯ ಪ್ರಮಾಣ ಪತ್ರಗಳು ಸಕಾಲದಲ್ಲಿ ಸಿಗದೇ ವಿದ್ಯಾರ್ಥಿಗಳು-ಪೋಷಕರು ಆತಂಕ್ಕೊಳಗಾಗುತ್ತಿದ್ದಾರೆ. ಹಾಗಾಗಿ ಪ್ರಮಾಣಪತ್ರಗಳನ್ನು ಶೀಘ್ರವಾಗಿ ನೀಡಬೇಕೆಂದು  ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಯುವ ಕಾಂಗ್ರೆಸ್ ಆಗ್ರಹಿಸಿದೆ.

youth congress ಯೂತ್​ ಕಾಂಗ್ರೆಸ್​ನ ಆಗ್ರಹವೇನು

ಈ ಕುರಿತು ಇಂದು ಶಿವಮೊಗ್ಗದ  ತಹಶೀಲ್ದಾರ್​ ಕಚೇರಿ ಎದುರು ಪ್ರತಿಭಟನೆ ನಡೆಸಿ ಯೂತ್​ ಕಾಂಗ್ರೆಸ್​ ಸರ್ಕಾರದ ನಿಯಮಾವಳಿಗಳಂತೆ ಯಾವುದೇ ಶಾಲಾ – ಕಾಲೇಜಿನ ಪ್ರವೇಶಕ್ಕೆ, ವಿದ್ಯಾರ್ಥಿ ನಿಲಯಗಳಲ್ಲಿ ಸೀಟು ಹಂಚಿಕೆಗೆ ವಿದ್ಯಾರ್ಥಿಗಳ ಜಾತಿ ಮತ್ತು ಆದಾಯ ಪ್ರಮಾಣಪತ್ರ ಕಡ್ಡಾಯವಾಗಿರುತ್ತದೆ. ಜಾತಿ ಮತ್ತು ಆದಾಯ ಪ್ರಮಾಣ ಪತ್ರಕ್ಕೆ ಅನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಬೇಕಿದ್ದು, ಹೀಗೆ ಸಲ್ಲಿಸಿದ ಅರ್ಜಿಗಳ ವಿಲೇ ಮಾಡಲು ಅಧಿಕಾರಿಗಳಿಗೆ ಸಕಾಲ ನಿಯಮದಂತೆ 21 ದಿನಗಳ ಕಾಲಾವಕಾಶ ಇರುತ್ತದೆ. ಇದನ್ನೇ ನೆಪವಾಗಿಟ್ಟುಕೊಂಡಿರುವ ಅಧಿಕಾರಿಗಳು ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಸೇರಿದಂತೆ ವಿದ್ಯಾರ್ಥಿಗಳಿಗೆ ಅಗತ್ಯವಿರುವ ದಾಖಲೆಗಳನ್ನು ಒದಗಿಸಲು ವಿಳಂಬ ಧೋರಣೆ ಅನುಸರಿಸುತ್ತಿದ್ದಾರೆ ಎಂದು ಆರೋಪಿಸಿದರು.

ಅಧಿಕಾರಿಗಳು ಈ ರೀತಿ ವಿಳಂಬ ಮಾಡುತ್ತಿರುವುದರಿಂದ ಬಡ ಮತ್ತು ಮಧ್ಯಮ ವರ್ಗದ ವಿದ್ಯಾರ್ಥಿಗಳು ಅದರಲ್ಲೂ ಗ್ರಾಮಾಂತರ ಕ್ಷೇತ್ರದ ವಿದ್ಯಾರ್ಥಿಗಳು ವಿದ್ಯಾರ್ಥಿ ನಿಲಯಗಳ ಪ್ರವೇಶ ಸಿಗದೇ ಶಿಕ್ಷಣದಿಂದ ವಂಚಿತವಾಗುವ ಆತಂಕ ಎದುರಿಸುತ್ತಿದ್ದಾರೆ. ಆದ್ದರಿಂದ ತಹಶೀಲ್ದಾರರು ಎಲ್ಲಾ ಗ್ರಾಮ ಲೆಕ್ಕಾಧಿಕಾರಿಗಳು, ಸಂಬಂಧಪಟ್ಟ ನೌಕರರ ಸಭೆ ಕರೆದು, ಸಮಾಲೋಚಿಸಿ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಉದ್ದೇಶಕ್ಕಾಗಿ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಸೇರಿದಂತೆ ಅಗತ್ಯ ದಾಖಲೆಗಳನ್ನು ತ್ವರಿತಗತಿಯಲ್ಲಿ ಒದಗಿಸಲು ಕ್ರಮ ಕೈಗೊಳ್ಳಬೇಕೆಂದು  ಆಗ್ರಹಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ಹರ್ಷಿತ್, ಕಿಸಾನ್ ಸೆಲ್ ಕಾರ್ಯಾಧ್ಯಕ್ಷ ಗಿರೀಶ್, ಗ್ರಾಮಾಂತರ ಯುವ ಕಾಂಗ್ರೆಸ್ ಅಧ್ಯಕ್ಷ ಪ್ರವೀಣ್ S, ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷಗಳಾದ  ಪ್ರವೀಣ್ ಗೌಡ, ಶಶಿಕುಮಾರ್ ಕೆ ಆರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಶಿವು ಮಲಗುಪ್ಪ, ಆಕಾಶ್, ವಿಷ್ಣು, ನಿಖಿಲ್, ನಾಗೇಂದ್ರ ಅಟೋಕ, ಬಾಲಾಜಿ ಹೆಚ್‌ ಶೆಟ್ಟಿ, ರಾಜೇಶ್, ಪ್ರಜ್ವಲ್, ಭುವನ್ ರಾಜ್, ಪ್ರೀತಮ್  ಸೇರಿದಂತೆ ಅನೇಕ ಯುವ  ಕಾರ್ಯಕರ್ತರು ಪಾಲ್ಗೊಂಡಿದ್ದರು.

ಹಂಚಿಕೊಳ್ಳಿ
WhatsApp Facebook X Telegram
Prathapa thirthahalli
ಲೇಖಕರ ಬಗ್ಗೆ

Prathapa thirthahalli

Malenadu Today Contributor