shivamogga exclusive news / ಸಿಟಿಬಸ್​ಗೆ ಕಾರು ಡಿಕ್ಕಿ, ಮಹಿಳೆ ಕುತ್ತಿಗೆಗೆ ಕೈ ಹಾಕಿದ ಕಳ್ಳ, ದೇಗುಲದಲ್ಲೇ ನಡೀತು ಈ ಘಟನೆ

Malenadu Today

shivamogga exclusive news ಶಿವಮೊಗ್ಗದಲ್ಲಿ ನಡೆದ ಘಟನೆಗಳ ಸಂಕ್ಷಿಪ್ತ ವಿವರ ಹೀಗಿದೆ. 

ಕಾರು ಬಸ್​ ಡಿಕ್ಕಿ

ಶಿವಮೊಗ್ಗದಲ್ಲಿ ಬುಧವಾರ (ಜೂನ್ 3) ಮಧ್ಯಾಹ್ನ ಸಂಭವಿಸಿದ ಅಪಘಾತದಲ್ಲಿ ಖಾಸಗಿ ಸಿಟಿ ಬಸ್‌ಗೆ ಕಾರು ಹಿಂದಿನಿಂದ ಢಿಕ್ಕಿ ಹೊಡೆದಿದೆ. ಈ ಘಟನೆ ಎಂಆರ್‌ಎಸ್‌‌ ಸರ್ಕಲ್​ ಸಮೀಪದ ನಡೆದಿದೆ, ಕಾರಿನಲ್ಲಿದ್ದ ಮೂವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಗೊಂಡವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದ ತೀವ್ರತೆಗೆ ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡಿದ್ದು, ಬಸ್ಸಿನ ಹಿಂಭಾಗಕ್ಕೂ ಹಾನಿಯಾಗಿದೆ. ಅಪಘಾತದಿಂದಾಗಿ ರಸ್ತೆ ಮಧ್ಯೆ ನಿಂತಿದ್ದ ಕಾರನ್ನು ಸ್ಥಳೀಯರು ಸೇರಿ ಬದಿಗೆ ಸರಿಸಿ, ಸಂಚಾರಕ್ಕೆ ಅನುವು ಮಾಡಿಕೊಟ್ಟರು.  ಪೂರ್ವ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಮಹಿಳೆಯ ಮಾಂಗಲ್ಯ ಸರ ಕಸಿದುಕೊಂಡು ಪರಾರಿ

ಸೊರಬ ತಾಲೂಕಿನ ಸಂಪಗೋಡಿನಲ್ಲಿ ಬುಧವಾರ (ಜೂನ್ 4) ಬಸ್‌ನಿಂದ ಇಳಿದು ದೇವಸ್ಥಾನಕ್ಕೆ ಹೋಗುತ್ತಿದ್ದ ಚಂದ್ರಮ್ಮ ಎಂಬ ಮಹಿಳೆಯನ್ನು ಬೈಕ್‌ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಅಡ್ಡಗಟ್ಟಿದ್ದಾರೆ. ಅವರಲ್ಲಿ ಒಬ್ಬಾತ ಮಹಿಳೆಯ ಮಾಂಗಲ್ಯ ಸರಕ್ಕೆ ಕೈ ಹಾಕಿದ್ದಾನೆ. ಮಹಿಳೆ ಸರವನ್ನು ಬಿಗಿಯಾಗಿ ಹಿಡಿದುಕೊಂಡ ಕಾರಣ, ಅದರ ಸ್ವಲ್ಪ ಭಾಗವನ್ನು ಮಾತ್ರ ಕಸಿದುಕೊಳ್ಳಲು ದುಷ್ಕರ್ಮಿಗಳಿಗೆ ಸಾಧ್ಯವಾಗಿದೆ. ಕಳವಾದ ಸರದ ಮೌಲ್ಯ 55 ಸಾವಿರ ರೂಪಾಯಿಗಳು ಮತ್ತು ತೂಕ 6-7 ಗ್ರಾಂ ಇರಬಹುದು ಎಂದು ಅಂದಾಜಿಸಲಾಗಿದೆ. ಈ ಕುರಿತು ಆನವಟ್ಟಿ ಠಾಣೆಯಲ್ಲಿ ದೂರು ದಾಖಲಾಗಿದೆ.

ದೇವಸ್ಥಾನದಲ್ಲಿ ಚಿನ್ನದ ಸರ ಕಳ್ಳತನ shivamogga exclusive news

ಸೊರಬ ತಾಲೂಕಿನ ಕಡಸೂರು ಗ್ರಾಮದ ಶ್ರೀ ಮಾರಿಕಾಂಬಾ ದೇವಿ ದೇವಸ್ಥಾನದಲ್ಲಿ ಕಳ್ಳತನ ನಡೆದಿದೆ. ಕಳ್ಳರು ದೇವಸ್ಥಾನದ ಬಾಗಿಲಿನ ಬೀಗ ಮುರಿದು ಒಳನುಗ್ಗಿ, ದೇವರ ಮೂರ್ತಿಯ ಮೇಲಿದ್ದ ಚಿನ್ನದ ತಾಳಿ ಸರವನ್ನು ಕದ್ದೊಯ್ದಿದ್ದಾರೆ. ಕಳವಾದ ಸರದ ಮೌಲ್ಯ ಸುಮಾರು 1 ಲಕ್ಷ ರೂಪಾಯಿಗಳು ಮತ್ತು ತೂಕ 10 ಗ್ರಾಂ ಎಂದು ಅಂದಾಜಿಸಲಾಗಿದೆ. ಈ ಘಟನೆ ಸಂಬಂಧ ಸೊರಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

 

Share This Article