caste census in karnataka 10-06-2025 :  ರಾಜ್ಯದಲ್ಲಿ ಮತ್ತೊಮ್ಮೆ ಜಾತಿಗಣತಿ

ಹಂಚಿಕೊಳ್ಳಿ
WhatsApp Facebook X Telegram
Karnataka Caste Census
Karnataka Caste Census

caste census in karnataka :  ರಾಜ್ಯದಲ್ಲಿ ಮತ್ತೊಮ್ಮೆ ಜಾತಿಗಣತಿ

ಜಾತಿಗಣತಿ ವಿಚಾರವಾಗಿ ಜೂನ್​ 12 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಶೇಷ ಸಚಿವ ಸಂಪುಟ ಸಭೆ ನಡೆಸಲಿದ್ದು, ರಾಜ್ಯದಲ್ಲಿ ಮತತ್ತೊಮ್ಮೆ ಜಾತಿಗಣತಿ ನಡೆಯಲಿದೆ ಎಂದು ಎಐಸಿಸಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ವೇಣುಗೋಪಲ್ ಹೇಳಿದ್ದಾರೆ.

caste census in karnataka   ಈಗಾಗಲೇ ದೇಶದಾದ್ಯಂತ ಜಾತಿಗಣತಿ ಬಗ್ಗೆ ಚರ್ಚೆ ನಡೆಯುತ್ತಿದೆ. ಹಾಗೆಯೇ ರಾಜ್ಯದಲ್ಲಿ ನಡೆದ ಜಾತಿಗಣತಿ ಬಗ್ಗೆ ಎಲ್ಲೆಡೆ ಅಪಸ್ವರಗಳು ಕೇಳಿ ಬಂದಿವದೆ. ಇದರ ನಡುವೆ ಇಂದು ​ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್​ ಅವರು ದೆಹಲಿಗೆ ತೆರಳಿದ್ದು, ಕಾಂಗ್ರೆಸ್​ ಹೈಕಮಾಂಡ್​ ನಾಯಕರನ್ನು ಭೇಟಿ ಮಾಡಿ ಸಭೆ ನಡೆಸಿದ್ದಾರೆ. ಈ ವೇಳೆ ಸಭೆಯಲ್ಲಿ  ಕಾಲ್ತುಳಿತ ಪ್ರಕರಣ ಹಾಗೂ ಜಾತಿ ಜಾತಿಗಣತಿ ಬಗ್ಗೆ ಚರ್ಚೆ ನಡೆದಿದೆ. ಈ ಬಗ್ಗೆ  ಎಐಸಿಸಿ ಪ್ರಧಾನ ಕಾರ್ಯದರ್ಶಿ ವೇಣುಗೋಪಲ್  ಮಾಹಿತಿ ನೀಡಿದ್ದಾರೆ

ಸಭೆಯಲ್ಲಿ  ಜಾತಿಗಣತಿ ಬಗ್ಗೆ ಚರ್ಚೆ ಮಾಡಿದ್ದೇವೆ. ಜಾತಿ ಗಣತಿ ವರದಿ ವಿಚಾರವಾಗಿ ಜೂನ್​ 12 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಶೇಷ ಸಚಿವ ಸಂಪುಟ ಸಭೆ ನಡೆಸಲಿದ್ದಾರೆ. ಜಾತಿ ಗಣತಿಯಲ್ಲಿ ಅಂಕಿ-ಸಂಖ್ಯೆಗಳನ್ನು ಸೀಮಿತ ಸಮಯದಲ್ಲಿ ಪುನರ್​ ಪರಿಶೀಲಿಸುವಂತೆ ಸೂಚನೆ ನೀಡಿದ್ದಾರೆ. ನಿರ್ಧಿಷ್ಟ ಕಾಲ ಮಿತಿಯಲ್ಲಿ ಮರು ಸರ್ವೇ ನಡೆಸಲಾಗುವುದು. ರಾಜ್ಯದಲ್ಲಿ ಮತ್ತೊಮ್ಮೆ ಜಾತಿಗಣತಿ ನಡೆಯಲಿದೆ ಎಂಬ ಮಾಹಿತಿಯನ್ನು ನೀಡಿದ್ದಾರೆ..

caste census in karnataka   ಹಾಗೆಯೇ ಕಾಲ್ತುಳಿತದ ಬಗ್ಗೆಯೂ ಇಲ್ಲಿ ಚರ್ಚೆ ನಡೆಸಲಾಗಿತ್ತು. ರಾಜ್ಯದ ನಾಯಕರಿಗೆ ಇನ್ಮುಂದೆ ಇಂತಹ ಘಟನೆಗಳು ಮರುಕಳಿಸಬಾರದು. ಯಾವದೇ ಕಾರ್ಯಕ್ರಮ ಮಾಡುವಾಗಲೂ ಮುನ್ನೆಚ್ಚರಿಕೆ ಕ್ರಮದಿಂದ ಮಾಡಬೇಕು ಎಂದು ರಾಹುಲ್​ ಗಾಂಧಿ ಸಲಹೆ ನೀಡಿದ್ದಾರೆ ಎಂದರು.

ಈ ಸಭೆಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್​ ಖರ್ಗೆ, ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ ಅವರ ಜೊತೆ ಸಭೆ ನಡೆಸಿದರು. ಸಭೆಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ರಣದೀಪ್​ ಸಿಂಗ್​ ಸುರ್ಜೇವಾಲ ಭಾಗಿಯಾಗಿದ್ದರು. 

 

ಹಂಚಿಕೊಳ್ಳಿ
WhatsApp Facebook X Telegram
Prathapa thirthahalli
ಲೇಖಕರ ಬಗ್ಗೆ

Prathapa thirthahalli

Malenadu Today Contributor