Public Nuisance case / ಶಿವಮೊಗ್ಗ ಪೊಲೀಸರ ನೈಟ್ ಆಪರೇಷನ್ / 28 ಕೇಸ್​/ ಹಲವರಿಗೆ ವಾರ್ನಿಂಗ್

Malenadu Today

Public Nuisance case

Shivamogga news / ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ನಿಟ್ಟಿನಲ್ಲಿ ಮತ್ತು ಮುಂಜಾಗ್ರತಾ ಕ್ರಮವಾಗಿ ನಿನ್ನೆ ಸಂಜೆ ಜಿಲ್ಲೆಯಾದ್ಯಂತ ಶಿವಮೊಗ್ಗ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿದ್ದಾರೆ. 

ಶಿವಮೊಗ್ಗ ಜಿಲ್ಲೆಯ ವ್ಯಾಪ್ತಿಯಲ್ಲಿರುವ  ಆಯಾ ಪೊಲೀಸ್ ಠಾಣೆಯ ಡಿವೈಎಸ್​ಪಿ ನೇತೃತ್ವದಲ್ಲಿ, ಪೊಲೀಸ್ ನಿರೀಕ್ಷಕರು, ಪೊಲೀಸ್ ಉಪನಿರೀಕ್ಷಕರು ಮತ್ತು ಸಿಬ್ಬಂದಿಗಳ ತಂಡಗಳು ‘ಏರಿಯಾ ಡಾಮಿನೇಷನ್’ ಹಾಗೂ ಸೂಕ್ಷ್ಮ ಪ್ರದೇಶಗಳಲ್ಲಿ ಕಾಲ್ನಡಿಗೆ ವಿಶೇಷ ಗಸ್ತು (Foot Patrolling) ನಡೆಸಿವೆ.

ಈ ಕಾರ್ಯಾಚರಣೆಯ ಸಂದರ್ಭದಲ್ಲಿ, ಸಾರ್ವಜನಿಕರಿಗೆ ತೊಂದರೆ ನೀಡಿದ (Public Nuisance) ಮತ್ತು ಅನುಮಾನಾಸ್ಪದ ವ್ಯಕ್ತಿಗಳ ವಿರುದ್ಧ 28 ಲಘು ಪ್ರಕರಣಗಳನ್ನು ದಾಖಲಿಸಲಾಗಿದೆ. ಜಿಲ್ಲೆಯಲ್ಲಿ ಶಾಂತಿ ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ನಿಟ್ಟಿನಲ್ಲಿ ಪೊಲೀಸರು ಈ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡಿದ್ದಾರೆ.

Share This Article