heavy rainfall incident / ಮಳೆ ಆರ್ಭಟಕ್ಕೆ ಕುಸಿದ ಗೋಡೆ, 80 ವರುಷದ ಮಹಿಳೆ ಸಾವು! ಮಗು ಸೇರಿ ಇಬ್ಬರು ಗಂಭೀರ

ಹಂಚಿಕೊಳ್ಳಿ
WhatsApp Facebook X Telegram
heavy rainfall incident
heavy rainfall incident

heavy rainfall incident  ಶಿವಮೊಗ್ಗದಲ್ಲಿ ಮಳೆಯ ಆರ್ಭಟದ ನಡುವೆ ಗೋಡೆ ಕುಸಿದು ವೃದ್ಧೆಯೊಬ್ಬರು ಸಾವನ್ನಪ್ಪಿದ್ದಾರೆ. ಶಿವಮೊಗ್ಗ ತಾಲೂಕಿನ ಆಡುಗಡಿ ಗ್ರಾಮದಲ್ಲಿ ತಡರಾತ್ರಿ ಈ ದುರ್ಘಟನೆ ಸಂಭವಿಸಿದೆ.

ಮಂಡಘಟ್ಟ ಗ್ರಾಮ ಪಂಚಾಯತಿ ವ್ಯಾಪ್ತಿಯ ಆಡುಗಡಿ ಗ್ರಾಮದಲ್ಲಿ, ತಡರಾತ್ರಿ ಸುರಿದ ಭಾರಿ ಮಳೆಯಿಂದಾಗಿ ಮನೆಯ ಗೋಡೆ ಕುಸಿದಿದೆ. ಗೋಡೆ ಕುಸಿತದ ವೇಳೆ ಮನೆಯಲ್ಲಿದ್ದ ಸಿದ್ಧಮ್ಮ ಎಂಬ 80 ವರ್ಷದ ವೃದ್ಧೆ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಈ ದುರ್ಘಟನೆಯಲ್ಲಿ ನಾಲ್ವರಿಗೆ ಗಾಯಗಳಾಗಿವೆ. ಹೇಮಾವತಿ (45) ಎಂಬುವರಿಗೆ ಗಂಭೀರ ಗಾಯಗಳಾಗಿದ್ದು, ಉಳಿದಂತೆ ಪರಶುರಾಮ್, ಪಲ್ಲವಿ ಮತ್ತು ಚೇತನ್ ಎಂಬುವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಗೊಂಡ ಎಲ್ಲರನ್ನೂ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರಿಗೆ ಚಿಕಿತ್ಸೆ ಮುಂದುವರಿದಿದೆ. ಮೃತ ಸಿದ್ಧಮ್ಮ ಅವರ ಮೃತದೇಹವನ್ನು ಮೆಗ್ಗಾನ್ ಆಸ್ಪತ್ರೆಯ ಶವಾಗಾರಕ್ಕೆ ಸ್ಥಳಾಂತರಿಸಲಾಗಿದೆ.

heavy rainfall incident

ಹಂಚಿಕೊಳ್ಳಿ
WhatsApp Facebook X Telegram
Malenadu Today
ಲೇಖಕರ ಬಗ್ಗೆ

Malenadu Today

Malenadu Today Contributor