indian post office : ತೀರ್ಥಹಳ್ಳಿ ಹಾಗೂ ಶಿವಮೊಗ್ಗ ವ್ಯಾಪ್ತಿಯ ಅಂಚೆ ಕಚೇರಿಗಳ ವಹಿವಾಟು ತಾತ್ಕಾಲಿಕ ಸ್ಥಗಿತ | ಕಾರಣವೇನು

ಹಂಚಿಕೊಳ್ಳಿ
WhatsApp Facebook X Telegram
indian post office
indian post office

indian post office : ತೀರ್ಥಹಳ್ಳಿ ಹಾಗೂ ಶಿವಮೊಗ್ಗ ವ್ಯಾಪ್ತಿಯ ಅಂಚೆ ಕಚೇರಿಗಳ ವಹಿವಾಟು ತಾತ್ಕಾಲಿಕ ಸ್ಥಗಿತ | ಕಾರಣವೇನು

ಭಾರತೀಯ ಅಂಚೆ ಇಲಾಖೆ ಆದೇಶದಂತೆ ಭದ್ರಾವತಿ ಮತ್ತು ಸಾಗರ ಪ್ರಧಾನ ಅಂಚೆ ಕಚೇರಿಗಳ ಮತ್ತು ಅದರ ವ್ಯಾಪ್ತಿಯ ಎಲ್ಲಾ ಉಪ ಹಾಗೂ ಶಾಖಾ ಅಂಚೆ ಕಚೇರಿಗಳಲ್ಲಿ ಹೊಸ ತಂತ್ರಾಂಶ (ಎ.ಪಿ.ಟಿ.2.0) ಅಳವಡಿಕೆ ಮಾಡಲು ಉದ್ದೇಶಿಸಿದೆ ಎಂದು ಅಂಚೆ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ಸಂಬಂಧ ಪೂರ್ವಸಿದ್ಧತೆಗಾಗಿ ಜೂನ್​ 21 ರಂದು ಶಿವಮೊಗ್ಗ ಹಾಗೂ ತೀರ್ಥಹಳ್ಳಿ ತಾಲೂಕುಗಳ ಅಡಿಯಲ್ಲಿ ಬರುವ ಅಂಚೆ ಕಚೇರಿಗಳಲ್ಲಿ ಎಲ್ಲಾ ರೀತಿಯ ವ್ಯವಹಾರ ವಹಿವಾಟುಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಿದೆ. 

indian post office :  ಹಾಗೆಯೇ ಜೂನ್. 25 ರಂದು ಭದ್ರಾವತಿ, ಸಾಗರ, ಸೊರಬ, ಹೊಸನಗರ ಹಾಗೂ ಶಿಕಾರಿಪುರ ತಾಲೂಕುಗಳ ಅಡಿಯಲ್ಲಿ ಬರುವ ಅಂಚೆ ಕಚೇರಿಗಳಲ್ಲಿ ಎಲ್ಲಾ ರೀತಿಯ ವ್ಯವಹಾರ ವಹಿವಾಟುಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಿದೆ. ಸಾರ್ವಜನಿಕರು ಸಹಕರಿಸುವಂತೆ ಅಂಚೆ ಅಧೀಕ್ಷಕ ಜಯರಾಮ ಶೆಟ್ಟಿ ಜಿ. ಅವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಹಂಚಿಕೊಳ್ಳಿ
WhatsApp Facebook X Telegram
Prathapa thirthahalli
ಲೇಖಕರ ಬಗ್ಗೆ

Prathapa thirthahalli

Malenadu Today Contributor