sigandur bridge : ಸಚಿವರನ್ನು ಬೇಟಿ ಮಾಡಿದ ಬಿವೈಆರ್​ : 1 ವಾರದಲ್ಲಿ ಸಿಗಂದೂರು ಸೇತುವೆ ಉದ್ಘಾಟನೆ ದಿನಾಂಕ ಘೋಷಣೆ ಸಾಧ್ಯತೆ​

prathapa thirthahalli
Prathapa thirthahalli - content producer

sigandur bridge : ಸಚಿವರನ್ನು ಬೇಟಿ ಮಾಡಿದ ಬಿವೈಆರ್​ : 1 ವಾರದಲ್ಲಿ ಸಿಗಂದೂರು ಸೇತುವೆ ಉದ್ಘಾಟನೆ ದಿನಾಂಕ ಘೋಷಣೆ ಸಾಧ್ಯತೆ​

sigandur bridge :  ಬಹು ನಿರೀಕ್ಷಿತ ಸಿಂಗದೂರು ಸೇತುವೆಯ ಉದ್ಘಾಟನೆಯ ದಿನಾಂಕ ಇನ್ನೇನು ಕೆಲವೇ ದಿನಗಳಲ್ಲಿ ಪ್ರಕಟವಾಗುವ ಸಾದ್ಯತೆ ಇದೆ. ಈ ಕುರಿತು ಶಿವಮೊಗ್ಗ ಸಂಸದ ಬಿವೈ ರಾಘವೇಂದ್ರ ದೆಹಲಿಯಲ್ಲಿ ಕೇಂದ್ರ ಭೂಸಾರಿಗೆ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ.

ಈ ಕುರಿತು ತಮ್ಮ ಫೇಸ್​ಬುಕ್ ಖಾತೆಯಲ್ಲಿ ಪೋಸ್ಟ್​ ಹಂಚಿಕೊಂಡಿರುವ ಸಂಸದರು ಸಾರ್ವಜನಿಕ ಸದ್ಬಳಕೆಗೆ ಅನುಕೂಲ ಮಾಡಿಕೊಡುವ ನಿಮಿತ್ತ ಸೇತುವೆ ಲೋಕಾರ್ಪಣೆಗೆ ದಿನಾಂಕ ನಿಗದಿ ಪಡಿಸುವಂತೆ ಕೇಂದ್ರ ಸಚಿವರಾದ  ನಿತಿನ್ ಗಡ್ಕರಿ ಅವರನ್ನು ಇಂದು ದೆಹಲಿಯಲ್ಲಿ ಭೇಟಿ ಮಾಡಿ ಮನವಿ ಮಾಡಿದ್ದೇನೆ. ಇನ್ನೊಂದು ವಾರದಲ್ಲಿ ಉದ್ಘಾಟನಾ ದಿನಾಂಕ ನಿಗದಿಯಾಗುವ ನಿರೀಕ್ಷೆ ಇದೆ.

- Advertisement -

ನವನವೀನ ತಂತ್ರಜ್ಞಾನ ಹಾಗೂ ಆಧುನಿಕ ತಾಂತ್ರಿಕ ವ್ಯವಸ್ಥೆಯಿಂದ ಅತ್ಯಂತ ಅಚ್ಚುಕಟ್ಟಾಗಿ ಸುಮಾರು 430. ಕೋಟಿ ಅನುದಾನದಲ್ಲಿ ರಾಜ್ಯದ ಅತಿ ಉದ್ದದ 2.44 ಕಿ.ಮೀ ಕೇಬಲ್ ಆಧಾರಿತ ಸೇತುವೆ ಕಾಮಗಾರಿ ಸಾರ್ವಜನಿಕ ಸೇವೆಗೆ ಅಡಿ ಇಡಲು ಶೀಘ್ರದಲ್ಲಿಯೇ ಸಜ್ಜಾಗಲಿದೆ ಎಂದು ಬರೆದುಕೊಂಡಿದ್ದಾರೆ.

 

  

Share This Article